Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಕನ್ನಡದ ಹಿರಿಯ ನಟ ಮನ್ ದೀಪ್ ರಾಯ್ ಹೃದಯಾಘಾತದಿಂದ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಮನ್ ದೀಪ್ ರಾಯ್ ಅವರು  ತಮ್ಮ ಕಾವಲ್ ಭೈರಸಂದ್ರ ನಿವಾಸದಲ್ಲಿ ತಡರಾತ್ರಿ 1:45ರ ಸುಮಾರಿಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಮನ್ ದೀಪ್ ರಾಯ್ ಅವರಿಗೆ 75 ವರ್ಷ ವಯಸ್ಸಾಗಿತ್ತು. ಅವರು ಸುಮಾರು 500ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದು, ಶಂಕರ್ ನಾಗ್, ಡಾ.ರಾಜ್ ಕುಮಾರ್ ಸೇರಿದಂತೆ ಕನ್ನಡದ ಅನೇಕ ದಿಗ್ಗಜ ನಟರೊಂದಿಗೆ ನಟನೆ ಮಾಡಿದ್ದರು.

ಮೃತರ ಅಂತ್ಯಕ್ರಿಯೆಯು ಇಂದು ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ನಡೆಯಲಿದೆ ಎಂದು ಎಂದು ವರದಿಯಾಗಿದೆ.

ಕಳೆದ ಡಿಸೆಂಬರ್ ನಲ್ಲಿಯೂ ಮನ್ ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

No Comments

Leave A Comment