Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೆಂಗಳೂರು: ಪಟ್ಟುಬಿಡದ ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ ಮುಂದುವರಿಕೆ

ಬೆಂಗಳೂರು: ಅಂಗನವಾಡಿಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಈ ನಡುವಲ್ಲೇ ಪ್ರತಿಭಟನೆಗಿಳಿದಿರುವ ಅಂಗನವಾಡಿ ಕಾರ್ಯಕರ್ತೆಯರು, ನಗರದಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯವರು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ವೇತನ ಹೆಚ್ಚಳ, ಪ್ರಾಥಮಿಕ ಶಾಲಾ ಶಿಕ್ಷಕರ ಸ್ಥಾನಮಾನ ಮತ್ತು ನಿವೃತ್ತಿ ನಿಧಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಸೋಮವಾರದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ.

ಜನವರಿ ತಿಂಗಳಿನಲ್ಲಿ ನಡೆಯುದ ಎರಡನೇ ಪ್ರತಿಭಟನೆ ಇದಾಗಿದೆ. ಜನವರಿ 19 ರಂದು ಕಾರ್ಮಿಕರು ಪ್ರತಿಭಟನೆ ನಡೆಸಿದ ನಂತರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಅವರು, ಅವರ ಬೇಡಿಕೆಗಳನ್ನು ಆಲಿಸಿದ್ದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಫೆಬ್ರವರಿ ತಿಂಗಳಿನಲ್ಲಿ ಎನ್ಇಪಿಯನ್ನು ಜಾರಿಗೆ ತರುವುದಾಗಿ ಹೇಳಿದ ಬೆನ್ನಲ್ಲೇ, ಪ್ರತಿಭಟನೆ ಭುಗಿಲೆದ್ದಿದೆ. ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಕಳೆದ ಒಂದು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರೂ ಈವರೆದೂ ಸರಕಾರ ಮಧ್ಯಪ್ರವೇಶಿಸಿಲ್ಲ.

ಅಂಗನವಾಡಿ ಕಾರ್ಯಕರ್ತೆಯರಿಗಿಂತ ಪ್ರಾಥಮಿಕ ಶಾಲಾ ಶಿಕ್ಷಕರು ಹೆಚ್ಚಿನ ಅರ್ಹತೆ ಹೊಂದಿರುವುದರಿಂದ ಸಮಸ್ಯೆ ಜಟಿಲವಾಗಿದೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಶಿಕ್ಷಕರನ್ನು ನೇಮಕಾತಿ ಪ್ರಕ್ರಿಯೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಾಗುವ ಮೊದಲು ಕೆಲವು ಅರ್ಹತೆಗಳನ್ನು ಹೊಂದಿರಬೇಕು. ಆದ್ದರಿಂದ, ಸಮಸ್ಯೆ ಹೆಚ್ಚು ಜಟಿಲವಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಅವರ ವಿದ್ಯಾರ್ಹತೆಯ ಆಧಾರದ ಮೇಲೆ ಪ್ರತ್ಯೇಕ ಸ್ಥಾನಮಾನ ನೀಡುವ ಅವಶ್ಯಕತೆ ಇದೆ’ ಎಂದು ಹೇಳಿದ್ದಾರೆ.

No Comments

Leave A Comment