
ಮೋರ್ಬಿ ಸೇತುವೆ ಕುಸಿತ: ಒರೆವಾ ಗ್ರೂಪ್ ಎಂಡಿ ಶರಣಾಗತಿ
ನವದೆಹಲಿ: 13 ಮಂದಿ ಸಾವಿಗೆ ಕಾರಣವಾಗಿದ್ದ ಮೋರ್ಬಿ ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸೇತುವೆ ನಿರ್ವಹಣಾ ಮೇಲುಸ್ತುವಾರಿ ನೋಡಿಕೊಳ್ಳುತ್ತಿದ್ದ ರೆವಾ ಗ್ರೂಪ್ ಎಂಡಿ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಕಳೆದ ವರ್ಷ 135 ಮಂದಿ ಸಾವಿಗೀಡಾದ ತೂಗು ಸೇತುವೆ ಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಒರೆವಾ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ಮಂಗಳವಾರ ಮೊರ್ಬಿಯ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಈ ಹಿಂದೆ ಜನವರಿ 27 ರಂದು ಪೊಲೀಸರು ಸಲ್ಲಿಸಿದ ಆರೋಪಪಟ್ಟಿಯಲ್ಲಿ ಪಟೇಲ್ ಅವರನ್ನು ಆರೋಪಿ ಎಂದು ಹೆಸರಿಸಲಾಗಿತ್ತು. ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕ ಜಯಸುಖ್ ಪಟೇಲ್ ತಮ್ಮ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ.
“ಜೈಸುಖ್ ಪಟೇಲ್ ಅವರ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ಎಂ ಜೆ ಖಾನ್ ಅವರ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ” ಎಂದು ಪ್ರಕರಣದಲ್ಲಿ ಸಂತ್ರಸ್ತರನ್ನು ಪ್ರತಿನಿಧಿಸುವ ವಕೀಲ ದಿಲೀಪ್ ಅಗೆಚನಿಯಾ ಹೇಳಿದ್ದಾರೆ.
ಅಜಂತಾ ಮ್ಯಾನುಫ್ಯಾಕ್ಚರಿಂಗ್ ಲಿಮಿಟೆಡ್ (ಒರೆವಾ ಗ್ರೂಪ್) ಮೊರ್ಬಿಯಲ್ಲಿನ ಮಚ್ಚು ನದಿಯ ಮೇಲೆ ಬ್ರಿಟಿಷ್ ಕಾಲದ ತೂಗು ಸೇತುವೆಯ ಕಾರ್ಯಾಚರಣೆ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಹೊಂದಿತ್ತು, ಅದು ಕಳೆದ ವರ್ಷ ಅಕ್ಟೋಬರ್ 30 ರಂದು ಅದರ ದುರಸ್ತಿಯ ನಂತರ ಕುಸಿದಿತ್ತು. ಈ ದುರ್ಘಟನೆಯಲ್ಲಿ 135 ಮಂದಿ ಸಾವಿಗೀಡಾಗಿದ್ದರು.