Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಮಂಗಳೂರು: ಜ್ಯುವೆಲ್ಲರಿ ಅಂಗಡಿಯಲ್ಲಿ ಚೂರಿ ಇರಿದು ಸಿಬಂದಿಯ ಹತ್ಯೆ

ಮಂಗಳೂರುಫೆ 03: ಹಂಪನಕಟ್ಟೆ ಮಿಲಾಗ್ರಿಸ್ ಸಮೀಪ ಜ್ಯುವೆಲ್ಲರಿ ಅಂಗಡಿಯಲ್ಲಿ ಕೆಲಸದ ಸಿಬಂದಿಯನ್ನು ಚೂರಿ ಇರಿದು ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ನಡೆದಿದೆ.

ಅತ್ತಾವರ ನಿವಾಸಿ ರಾಘವ (50) ಹತ್ಯೆಗೀಡಾದವರು.

ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವ ದೃಶ್ಯ ಸಿಸಿ ಕೆಮರಾದಲ್ಲಿ ದಾಖಲಾಗಿದ್ದು, ಜ್ಯುವೆಲ್ಲರಿಯಿಂದ ಓರ್ವ ಮುಸುಕುಧಾರಿ ಹೊರಗೆ ಬರುವುದು ಕಂಡು ಬಂದಿದೆ.

ಇನ್ನು ಅಂಗಡಿಯಲ್ಲಿ ಒಬ್ಬರೇ ಇದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ದರೋಡೆಯೆ ಅಥವಾ ಬೇರೆ ಕಾರಣವೇ ತಿಳಿದು ಬಂದಿಲ್ಲ.‌ ಅಂಗಡಿ ಮಾಲಕರು ಊಟ ಮಾಡಿ ಬಂದಾಗ ಘಟನೆ ಗಮನಕ್ಕೆ ಬಂದಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಡಿಸಿಪಿ ಅಂಶುಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

No Comments

Leave A Comment