Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಸೌದಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮಂಗಳೂರಿನ ಮೂವರು ಸಾವು

ಮಂಗಳೂರು: ಸೌದಿ ಅರೇಬಿಯಾದ ರಿಯಾದ್ ಪ್ರಾಂತ್ಯದ ಖುರೈಸ್ ರಸ್ತೆಯ ಬಳಿ ಅಪಘಾತದಲ್ಲಿ ಮಂಗಳೂರು ಮೂಲದ ಅಕೀಲ್, ನಾಸಿರ್, ರಿಝ್ವಾನ್ ಸಾವನಪ್ಪಿದ್ದಾರೆ.

ನಾಲ್ವರು ಕಾರಿನಲ್ಲಿ ಹೋಗುತ್ತಿದ್ದಾಗ ಖುರೈಸ್ ರಸ್ತೆಯ ಬಳಿ ಒಂಟೆಗೆ ಡಿಕ್ಕಿಯಾಗಿ ದುರಂತ ಸಂಭವಿಸಿದೆ.

ಕಾರಿನಲ್ಲಿದ್ದ ನಾಲ್ವರು ಕೂಡ SAQCO ಎಂಬ ಕಂಪನಿಯಲ್ಲಿ ನೌಕರರಾಗಿದ್ದರು

ಕಾರಿನಲ್ಲಿದ್ದ ಓರ್ವ ಬಾಂಗ್ಲಾದೇಶದ ಯುವಕ ಕೂಡ ಮೃತಪಟ್ಟಿದ್ದಾನೆ. ಮೃತದೇಹಗಳನ್ನು ಸೌದಿಯ ಅಲ್ ಹಸ್ಸಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸದ್ಯ ಮಂಗಳೂರಿನ ಸಂತ್ರಸ್ತ ಕುಟುಂಬವನ್ನು ಸಂಪರ್ಕಿಸಿ ಮಾಹಿತಿ ನೀಡಲಾಗಿದೆ, ಅಕೀಲ್ ಮಂಗಳೂರಿನ ಬೋಳಾರ್ ನಿವಾಸಿಯಾಗಿದ್ದು, ರಿಝ್ವಾನ್ ಹಳೆಯಂಗಡಿ ಕದಿಕೆ ನಿವಾಸಿಯಾಗಿದ್ದಾರೆ.

No Comments

Leave A Comment