Log In
BREAKING NEWS >
...........ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ,ಅಭಿಮಾನಿಗಳಿಗೆ "ಶ್ರೀರಾಮನವಮಿ"ಯ ಶುಭಾಶಯಗಳು.......

ಹಳೆಯಂಗಡಿ ಅಪಘಾತ ಪ್ರಕರಣ : ಆರೋಪಿ ತುಳು ಸ್ಟ್ಯಾಂಡ್ ಆಫ್ ಕಾಮಿಡಿಯನ್ ಅರ್ಪಿತ್ ಬಂಧನ

ಹಳೆಯಂಗಡಿ: ಹಳೆಯಂಗಡಿ ಸಮೀಪದ ಪಡುಪಣಂಬೂರು ರಾಷ್ಟ್ರೀಯ ಹೆದ್ದಾರಿಯ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಮಧ್ಯರಾತ್ರಿ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಆರೋಪಿ ಕಾರು ಚಾಲಕನನ್ನು ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಕಾರು ಸಮೇತ ಬಂಧಿಸಿರುವುದಾಗಿ ವರದಿಯಾಗಿದೆ.

ಆರೋಪಿ ಕಾರು ಚಾಲಕನನ್ನು ಹಳೆಯಂಗಡಿ ಇಂದಿರಾನಗರ MCF ಕಾಲನಿ ನಿವಾಸಿ ಅರ್ಪಿತ್ ಎಂದು ಗುರುತಿಸಲಾಗಿದ್ದು, ಈತ ತುಳು ಸ್ಟ್ಯಾಂಡ್ ಆಫ್ ಕಾಮಿಡಿ ಯೂಟ್ಯೂಬರ್ ಎಂದು ತಿಳಿದು ಬಂದಿದೆ.

ಮಧ್ಯಪ್ರದೇಶದ ಇಂದೋರ್‌ನಿಂದ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಪಡುಪಣಂಬೂರು ಬಳಿ ಟಯರ್ ಪಂಚರ್ ಆಗಿದ್ದು ಲಾರಿಯಲ್ಲಿದ್ದ ಮಧ್ಯಪ್ರದೇಶ ನಿವಾಸಿಗಳಾದ ಬಬುಲು(23), ಆಚಲ್ ಸಿಂಗ್ (30) ಹಾಗೂ ಕೇರಳ ನಿವಾಸಿ ಅನೀಶ್(42) ಎಂಬವರು ಕೆಳಗಿಳಿದು ಹೆದ್ದಾರಿ ಬದಿಯಲ್ಲಿ ಟಯರ್ ತೆಗೆದು ದುರಸ್ತಿ ಮಾಡುತ್ತಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಅತೀ ವೇಗದಿಂದ ಚಲಿಸಿದ ಕಾರು ಲಾರಿಯ ಟಯರ್ ದುರಸ್ತಿ ಮಾಡುತ್ತಿದ್ದ ಮೂವರಿಗೆ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಘಟನೆಯಲ್ಲಿ ಇಬ್ಬರು

ಸ್ಥಳದಲ್ಲಿ ಮೃತಪಟ್ಟಿದ್ದು ಮತ್ತೋರ್ವ ಗಾಯಾಳು ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

No Comments

Leave A Comment