Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

ದೆಹಲಿ: ಐಬಿ ನಿರ್ದೇಶಕರ ನಿವಾಸದಲ್ಲಿ ಗುಂಡು ಹಾರಿಸಿಕೊಂಡು ಸಿಆರ್‌ಪಿಎಫ್ ಎಎಸ್‌ಐ ಆತ್ಮಹತ್ಯೆ

ನವದೆಹಲಿ: ಗುಪ್ತಚರ ಬ್ಯೂರೋ ನಿರ್ದೇಶಕರ ಮನೆಯಲ್ಲಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ 53 ವರ್ಷದ  ಸಿಆರ್ ಪಿಎಫ್ ಎಎಸ್ ಐ ಒಬ್ಬರು  ತಮ್ಮ ಸರ್ವೀಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.  ಮೃತರನ್ನು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಸಹಾಯಕ ಸಬ್ ಇನ್ಸ್‌ಪೆಕ್ಟರ್ ರಾಜಬೀರ್ ಸಿಂಗ್ ಎಂದು ಗುರುತಿಸಲಾಗಿದೆ.

ಗುಪ್ತಚರ ಬ್ಯೂರೋ ನಿರ್ದೇಶಕರ ನಿವಾಸದಲ್ಲಿ ಗಾರ್ಡ್ ಆಗಿ ಅವರನ್ನು ನಿಯೋಜಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಮರಣೋತ್ತರ ಪರೀಕ್ಷೆ ನಡೆಸಲಾಗುವುದು, ನಂತರ ಅವರ ಮೃತದೇಹವನ್ನು ಅವರ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment