Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉಳ್ಳಾಲ: ಟಯರ್ ಸಿಡಿದು ಪಲ್ಟಿಯಾದ ಟೆಂಪೋ, ಚಾಲಕನಿಗೆ ಗಾಯ – ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿ

ಉಳ್ಳಾಲ:ಫೆ 06.ತೊಕ್ಕೊಟ್ಟು ಕಲ್ಲಾಪು ಎಂಬಲ್ಲಿ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಉರುಳಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ಲಾರಿ ಚಾಲಕ ಸಾದಿಕ್ ಸ್ವಲ್ಪ ಗಾಯದಿಂದ ಪಾರಾಗಿದ್ದಾರೆ. ಮಂಗಳೂರು ಧಕ್ಕೆಯಿಂದ ಉಳ್ಳಾಲ ಫಿಷ್ ಮಿಲ್ ಗೆ ಮೀನು ಸಾಗಾಟ ನಡೆಸುತ್ತಿದ್ದ ಟೆಂಪೋ, ಚಾಲಕನ ನಿಯಂತ್ರಣ ತಪ್ಪಿ ವಾಲಿದ್ದು, ಈ ವೇಳೆ ಟಯರ್ ಸಿಡಿದು ರಸ್ತೆಗೆ ಉರುಳಿದೆ.

ಘಟನೆಯಿಂದ ರಸ್ತೆಯಲ್ಲಿ ಮೀನು ಚಲ್ಲಾಪಿಲ್ಲಿಯಾಗಿ ಹರಡಿಕೊಂಡಿದ್ದು ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾಗಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ಪೊಲೀಸರು ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ.

No Comments

Leave A Comment