Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಅಸ್ಸಾಂ: ತೀವ್ರ ವಿರೋಧದ ನಡುವೆಯೇ ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ: 2,441 ಮಂದಿ ಬಂಧನ

ಗುವಾಹತಿ: ಪ್ರತಿಪಕ್ಷಗಳ ಟೀಕೆ ಮತ್ತು ತೀವ್ರ ಪ್ರತಿಭಟನೆಗಳ ನಡುವೆಯೇ ಅಸ್ಸಾಂ ಪೊಲೀಸರು ಬಾಲ್ಯ ವಿವಾಹದ ವಿರುದ್ಧ ಕಾರ್ಯಾಚರಣೆ ಮುಂದುವರೆಸಿದ್ದು, ಮೂರು ದಿನಗಳ ಅವಧಿಯಲ್ಲಿ ಒಟ್ಟು 2,441 ಮಂದಿಯನ್ನು ಬಂಧಿಸಿದ್ದಾರೆ.

ಬಾಲ್ಯವಿವಾಹ ಸಾಮಾಜಿಕ ಪಿಡುಗನ್ನು ಕೊನೆಗೊಳಿಸುವ ಕಾರ್ಯಾಚರಣೆಯು ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಚಾಲ್ತಿಯಲ್ಲಿರಲಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಶನಿವಾರ ಸ್ಪಷ್ಟಪಡಿಸಿದ್ದರು. ಆದರೆ, ಇದು ತರಾತುರಿಯಲ್ಲಿ ನಡೆಸಿದ ಪ್ರಚಾರದ ಕಸರತ್ತು ಎಂದು ಪ್ರತಿಪಕ್ಷಗಳು ಟೀಕಿಸಿವೆ.

ಬಾಲ್ಯ ವಿವಾಹ ತಡೆ ಕಾಯ್ದೆ ಅಡಿಯಲ್ಲಿ ರಾಜ್ಯಾದ್ಯಂತ 4,074 ಎಫ್‌ಐಆರ್‌ಗಳು ದಾಖಲಾಗಿದ್ದು, ಅದರ ಆಧಾರದಲ್ಲಿ ಬಂಧನ ಪ್ರಕ್ರಿಯೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಸ್ವನಾಥ್ ಜಿಲ್ಲೆಯಲ್ಲಿ ಕನಿಷ್ಠ 139 ಜನರನ್ನು ಬಂಧಿಸಲಾಗಿದೆ, ಬರ್ಪೇಟಾದಲ್ಲಿ 130 ಮತ್ತು ಧುಬ್ರಿಯಲ್ಲಿ 126, ಬಕ್ಸಾದಲ್ಲಿ 123, ಬೊಂಗೈಗಾಂವ್ ಮತ್ತು ಹೊಜೈನಲ್ಲಿ ತಲಾ 117 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರ ಹೇಳಿಕೆ ತಿಳಿಸಿದೆ.

ಬಾಲ್ಯ ವಿವಾಹಗಳ ವಿರುದ್ಧ ಧುಬ್ರಿಯಲ್ಲಿ ಅತಿ ಹೆಚ್ಚು (374) ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಹೊಜೈ (255) ಮತ್ತು ಮೊರಿಗಾಂವ್ (224) ನಂತರದ ಸ್ಥಾನದಲ್ಲಿವೆ.

ಕಾರ್ಯಾಚರಣೆ ವಿರುದ್ಧ ಬರಾಕ್ ಕಣಿವೆಯ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆದಿವೆ.

No Comments

Leave A Comment