Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪ್ರಬಲ ಭೂಕಂಪನ: ಟರ್ಕಿ, ಸಿರಿಯಾದಲ್ಲಿ ಸಾವಿನ ಸಂಖ್ಯೆ 1,300ಕ್ಕೆ ಏರಿಕೆ, ಹಲವರು ನಾಪತ್ತೆ

ನವದೆಹಲಿ: ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ ಸಾವಿನ ಸಂಖ್ಯೆ 1,300 ದಾಟಿದ್ದು, ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಸೋಮವಾರ ಮುಂಜಾನೆ ದಕ್ಷಿಣ ಟರ್ಕಿ ಮತ್ತು ಉತ್ತರ ಸಿರಿಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕಂಪನದ ತೀವ್ರತೆಯ ಪರಿಣಾಮ ಉಭಯ ದೇಶಗಳಲ್ಲಿ ನೂರಾರು ಕಟ್ಟಡಗಳು ಧರೆಗುರುಳಿದಿವೆ. ಕಂಪನದಿಂದಾಗಿ ಈ ವರೆಗೂ ಕನಿಷ್ಠ 1,300 ಜನರ ಬಲಿ ಪಡೆದಿದೆ.

ನೂರಾರು ಜನರು ಇನ್ನೂ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯಕರ್ತರು ಪ್ರದೇಶದಾದ್ಯಂತ ನಗರಗಳು ಮತ್ತು ಪಟ್ಟಣಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಟರ್ಕಿ-ಸಿರಿಯಾದ ಗಡಿಯ ಎರಡೂ ಬದಿಯಲ್ಲಿ ಭೂಕಂಪನ ಸಂಭವಿಸಿದ್ದು, ನಿದ್ರೆಗೆ ಜಾರಿದ್ದ ಜನ ಚಿರನಿದ್ರೆಗೆ ಜಾರಿದ್ದಾರೆ. ಹಲವರು ಶೀತ, ಮಳೆ ಮತ್ತು ಹಿಮಭರಿತ ಚಳಿಗಾಲದ ಹೊರತಾಗಿಯೂ ಕಂಪನದಿಂದ ತಪ್ಪಿಸಿಕೊಳ್ಳಲು ರಾತ್ರಿ ವೇಳೆ ಹೊರಗೆ ದೌಡಾಯಿಸಿದ್ದಾರೆ.

ಕಂಪನದ ಪರಿಣಾಮ ಹಲವು ಕಟ್ಟಡಗಳು ನೆಲಸಮಗೊಂಡಿದ್ದು, ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಕಾರ್ಯಕರ್ತರು ಅವಶೇಷಗಳಡಿ ಸಿಲುಕಿರುವವರ ರಕ್ಷಣೆಗೆ ಭರದಿಂದ ಕಾರ್ಯಾಚರಣೆ ನಡೆಸಿದ್ದಾರೆ.

No Comments

Leave A Comment