Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

ಮಂಗಳೂರು: ಲಾಡ್ಜ್‌ನಲ್ಲಿ ಕೇರಳದ ಮೂಲದ ದಂಪತಿಯ ಮೃತದೇಹ ಪತ್ತೆ

ಮಂಗಳೂರು: ಖಾಸಗಿ ಲಾಡ್ಜ್ ವೊಂದರಲ್ಲಿ ಕೇರಳ ಮೂಲದ ದಂಪತಿ ನೇಣುಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಫೆಬ್ರವರಿ 6ರಂದು ಫಳ್ನೀರ್ ನ ಲಾಡ್ಜ್ ನಲ್ಲಿ ರೂಂ ಪಡೆದಿದ್ದ ಕೇರಳ ಮೂಲದ 55 ವರ್ಷದ ರವೀಂದ್ರ ಹಾಗೂ ಅವರ ಪತ್ನಿ 50 ವರ್ಷದ ಸುಧಾ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು ಮೃತರು ಕೇರಳ ಮೂಲದವರಾಗಿದ್ದು ಬಟ್ಟೆ ವ್ಯಾಪಾರಿ ಎಂಬ ಮಾಹಿತಿ ಇದೆ. ಆತ್ಮಹತ್ಯೆಗೆ ಕಾರಣ ಏನೆಂದು ಗೊತ್ತಾಗಿಲ್ಲ. ಪರಿಶೀಲನೆ ನಡೆಸಲಾಗುತ್ತಿದೆ ಎಂದರು.

No Comments

Leave A Comment