Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತರ ದಾಳಿ, ಪರಿಶೀಲನೆ

ಬೆಂಗಳೂರು: ನಗರದ ವೈಯಾಲಿಕಾವಲ್ ನಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- ಬಿಡಿಎ ಕಚೇರಿ ಮೇಲೆ ಲೋಕಾಯುಕ್ತರು ಇಂದು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ.

ಲೋಕಾಯುಕ್ತ ಎಸ್ ಪಿ ಅಶೋಕ್ ನೇತೃತ್ವದಲ್ಲಿನ ಆರು ತಂಡ ಏಕ ಕಾಲಕ್ಕೆ ದಾಳಿ ನಡೆಸಿದೆ. 35ಕ್ಕೂ ಹೆಚ್ಚು ಲೋಕಾಯುಕ್ತರು ಅಧಿಕಾರಿಗಳು ಕಚೇರಿಯ ನಾಲ್ಕು ಬಾಗಿಲು ಮುಚ್ಚಿ ದಾಖಲೆ ಪತ್ರಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿ ಒಳಗಿದ್ದ ಪ್ರತಿಯೊಬ್ಬರನ್ನು ತಪಾಸಣೆ ಮಾಡಿ ಹೊರಗೆ ಬಿಡಲಾಗುತ್ತಿದೆ. ಕಚೇರಿ ಆವರಣದಲ್ಲೂ ಟೇಬಲ್ ಹಾಕಿಕೊಂಡು ಕುಳಿತ ಅಧಿಕಾರಿಗಳು, ಸಾರ್ವಜನಿಕರಿಂದ ದೂರು ಸ್ವೀಕರಿಸುತ್ತಿದ್ದಾರೆ.

ಕಾರ್ನರ್ ಸೈಟ್  ಹಂಚಿಕೆ ಹಾಗೂ ಲೇಔಟ್ ನಿರ್ಮಾಣ ಪ್ರಕ್ರಿಯೆಯಲ್ಲಿ ಬಿಡಿಎ ವಿರುದ್ಧ ಸಾಕಷ್ಟು ಅವ್ಯವಹಾರದ ಆರೋಪ ಕೇಳಿಬಂದಿತ್ತು. ಪರಿಹಾರ ನೀಡುವಲ್ಲಿಯೂ ವ್ಯಾಪಕ ಭ್ರಷ್ಟಾಚಾರದ ದೂರುಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಬಿಡಿಎ ದಾಳಿ ನಡೆಸಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ.

No Comments

Leave A Comment