Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಮೈಸೂರು ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ : ಗಾಂಜಾ, ಆಯುಧ, ಮೊಬೈಲ್ ಪತ್ತೆ

ಮೈಸೂರು : ಮೈಸೂರಿನ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ಏಕಾಏಕಿ​ ದಾಳಿ ನಡೆಸಿದ್ದು, ಕೈದಿಗಳಿಂದ ಮೊಬೈಲ್, ಹಣ, ಗಾಂಜಾ, ಚಾಕು ಕತ್ತರಿ ಮತ್ತು ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ ನೇತೃತ್ವದಲ್ಲಿ ಡಿಸಿಪಿಗಳಾದ ಎಂ.ಮುತ್ತುರಾಜು, ಎಸ್‌.ಜಾಹ್ನವಿ ಸೇರಿದಂತೆ ಎಲ್ಲ ವಿಭಾಗದ ಎಸಿಪಿ, ಇನ್‌ಸ್ಪೆಕ್ಟರ್‌, ಸಬ್‌ಇನ್‌ಸ್ಪೆಕ್ಟರ್‌ಗಳು ಈ ಕಾರ್ಯಾಚರಣೆ ನಡೆಸಿದರು. ಕಮಾಂಡೋ ಪಡೆ ಹಾಗೂ ಮಾದಕ ವಸ್ತು ಪತ್ತೆ ಹಚ್ಚುವ ಶ್ವಾನದಳವೂ ಇತ್ತು.

ಈ ಕುರಿತು ನಗರ ಪೊಲೀಸ್‌ ಆಯುಕ್ತ ರಮೇಶ್‌ ಬಾನೋತ್‌ ಅನಿರೀಕ್ಷಿತ ದಾಳಿ ನಡೆಸಿ ತಪಾಸಣೆ ನಡೆಸಿದ್ದೇವೆ. ಗಾಂಜಾ, ನಗದು ಸೇರಿದಂತೆ ಚಮಚದಿಂದ ಮಾಡಿದ 8 ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಎಲ್ಲಿಂದ ವಸ್ತುಗಳು ಜೈಲಿಗೆ ಬರುತ್ತಿವೆ ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಇನ್ನೂ ಕಾರಾಗೃಹಕ್ಕೆ ಹೊಂದಿಕೊಂಡಿರುವ ಸ್ಮಶಾನದ ಕಡೆಯಿಂದ ಬರುತ್ತಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಜೈಲಿನಲ್ಲಿ ಮಾದಕವಸ್ತು, ಮೊಬೈಲ್‌ಗಳು ಸಿಗುವುದು ಗಂಭೀರ ವಿಷಯ. ಈ ಬಗ್ಗೆ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಗೆ ವರದಿ ನೀಡಲಾಗುವುದು ಎಂದರು.

No Comments

Leave A Comment