Log In
BREAKING NEWS >
"ಕರಾವಳಿಕಿರಣ ಡಾಟ್ ಕಾ೦"ನ ಎಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ "ಶ್ರೀಅನ೦ತವೃತ"ದ ಶುಭಾಶಯಗಳು...

ತುಮಕೂರಿನಲ್ಲಿ ಭೀಕರ ಅಪಘಾತಕ್ಕೆ ಕಾರು ಛಿದ್ರ ಛಿದ್ರ: ನವದಂಪತಿ ದುರ್ಮರಣ

ತಮುಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರ್ ಗೇಟ್ ಬಳಿ ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ನವದಂಪತಿಗಳ ಕಾರು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇಂದು ಮಧ್ಯಾಹ್ನ ಅಪಘಾತ ಸಂಭವಿಸಿದ್ದು ಕೇವಲ ಒಂದೂವರೆ ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಸಾಫ್ಟ್ ವೇರ್ ಟೆಕ್ಕಿ ಜೋಡಿ ಮೃತಪಟ್ಟಿದೆ. ಮೃತರನ್ನು ಅರಸಿಕೆರೆ ಮೂಲದ 35 ವರ್ಷದ ರಘು ಮತ್ತು ತಿಗಳನಹಳ್ಳಿ ಮೂಲದ 28 ವರ್ಷದ ಅನುಷಾ ಎಂದು ಗುರುತಿಸಲಾಗಿದೆ.

ರಘು ಮತ್ತು ಅನುಷಾ ದಂಪತಿ ಇಬ್ಬರೂ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಗಳಾಗಿದ್ದು ಸಂಬಂಧಿಕರ ಮದುವೆಗೆಂದು ಬಳ್ಳಾರಿ ಕಡೆಗೆ ತೆರಳುತ್ತಿದ್ದಾಗ ಹುಳಿಯಾರ್ ಗೇಟ್ ಬಳಿ ಅಪಘಾತ ಸಂಭವಿಸಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment