Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಪುತ್ತೂರು: ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಅಮಿತ್ ಶಾ ಚಾಲನೆ

ಮಂಗಳೂರು, ಫೆ 11 ಅಂತಾರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಆಚರಣೆ ಹಿನ್ನಲೆಯಲ್ಲಿ ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು ಇಂದು ಪುತ್ತೂರಿಗೆ ಆಗಮಿಸಿದ್ದು, ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲಮಾಧ್ಯಮ ಶಾಲಾ ಮೈದಾನದಲ್ಲಿ ಸಮಾವೇಶಕ್ಕೆ ತೆರಲಿರುವ ಅಮಿತ್ ಶಾ ಅವರು ಈ ವೇಳೆ ಕ್ಯಾಂಪ್ಕೋದ ಸುವರ್ಣ ಮಹೋತ್ಸವ ಚಾಲನೆ ನೀಡಿದ್ದಾರೆ.

ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಗೃಹ ಸಚಿವರಾದ ಆರಗ ಜ್ಞಾನೇಂದ್ರ, ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲ ಸಾರಿಗೆ ಸಚಿವರಾದ ಎಸ್. ಅಂಗಾರ, ಸಹಕಾರ ಸಚಿವರಾದ ಸೋಮಶೇಖರ್, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ನಿಕಟಪೂರ್ವ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಸಂಸದರಾದ ನಳಿನ್ ಕುಮಾರ್ ಕಟೀಲ್, ಸ್ಥಳೀಯ ಶಾಸಕರಾದ ಸಂಜೀವ ಮಠಂದೂರು, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

No Comments

Leave A Comment