Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಪಶ್ಚಿಮ ಬಂಗಾಳ: ಜಾತ್ರೆಯಲ್ಲಿ ಬಲೂನ್ ಗೆ ಗ್ಯಾಸ್ ತುಂಬುತ್ತಿದ್ದ ಸಿಲಿಂಡರ್ ಸ್ಫೋಟ, ನಾಲ್ವರು ಸಾವು

ಬರೀಪುರ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದ ಗ್ರಾಮ ಜಾತ್ರೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕೋಲ್ಕತ್ತಾದಿಂದ 50 ಕಿಮೀ ದೂರದಲ್ಲಿರುವ ಜೋಯ್‌ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬಂಟ್ರಾ ಗ್ರಾಮದಲ್ಲಿ ಭಾನುವಾರ ರಾತ್ರಿ 10.10 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.

ಪ್ರಾಥಮಿಕ ವಿಚಾರಣೆಯ ನಂತರ, ಬಲೂನ್ ಮಾರಾಟಗಾರರು ಬಲೂನ್ ಗೆ ಪಂಪ್ ಮಾಡಲು ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸಾಹಿನ್ ಮೊಲ್ಲಾ(13), ಕುತುಬುದ್ದೀನ್ ಮಿಸ್ತ್ರಿ(35), ಅಬೀರ್ ಗಾಜಿ(8) ಮತ್ತು ಬಲೂನ್ ಮಾರಾಟಗಾರ ಮುಚಿರಾಮ್ ಮೊಂಡಲ್(35) ಎಂದು ಗುರುತಿಸಲಾಗಿದೆ.

ಗಾಯಾಳುಗಳನ್ನು ಬರುಯಿಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

No Comments

Leave A Comment