Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಮಹಾರಾಷ್ಟ್ರದ ನೂತನ ರಾಜ್ಯಪಾಲರಾಗಿ ರಮೇಶ್ ಬೈಸ್ ಪ್ರಮಾಣವಚನ ಸ್ವೀಕಾರ

ಮುಂಬೈ: ಮಹಾರಾಷ್ಟ್ರದ ರಾಜ್ಯಪಾಲರಾಗಿ ರಮೇಶ್ ಬೈಸ್ ಅವರು, ಶನಿವಾರ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ರಮೇಶ್ ಬೈಸ್ ಅವರಿಗೆ ಬಾಂಬೆ ಹೈಕೋರ್ಟ್​ನ ಹಂಗಾಮಿ ಮುಖ್ಯನ್ಯಾಯಾಧೀಶ ಎಸ್.ವಿ. ಗಂಗಾಪುರ್​ವಾಲ ಅವರು ಪ್ರಮಾಣವಚನ ಬೋಧಿಸಿದರು.

ಈ ಸಂದರ್ಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂದೆ, ಸಂಪುಟ ಸದಸ್ಯರು, ಉನ್ನತ ಹಂತದ ಅಧಿಕಾರಿಗಳು ಉಪಸ್ಥಿತರಿದ್ದರು.

ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್, ಜಂಟಿ ಕಾರ್ಯದರ್ಶಿಗಳಾದ ಶ್ವೇತಾ ಸಿಂಘಲ್ ಮತ್ತು ಪ್ರಾಚಿ ಜಾಂಭೇಕರ್ ಮೊದಲಾದವರೂ ಪ್ರಮಾಣವಚನ ಸಮಾರಂಭದಲ್ಲಿ ಹಾಜರಿದ್ದರು.

ಹಿಂದಿನ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಸ್ಥಾನವನ್ನು ರಮೇಶ್ ಬೈಸ್ ತುಂಬಿದ್ದಾರೆ. 2019ರಲ್ಲಿ ಮಹಾರಾಷ್ಟ್ರ ರಾಜ್ಯಪಾಲರಾಗಿ ನೇಮಕವಾಗಿದ್ದ ಭಗತ್ ಸಿಂಗ್ ಕೋಶ್ಯಾರಿ ಕಳೆದ ವಾರ ರಾಜೀನಾಮೆ ನೀಡಿದ್ದರು. ಕೋಶ್ಯಾರಿ ಅವರಿಗೆ ನಿನ್ನೆ ರಾಜಭವನದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿತ್ತು. ಭಾರತೀಯ ನೌಕಾಪಡೆಯ ತಂಡವೊಂದು ನಿರ್ಗಮಿತ ರಾಜ್ಯಪಾಲರಿಗೆ ವಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

No Comments

Leave A Comment