Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಉಡುಪಿ: ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ದೋಣಿ ಮುಳುಗಿ ಮೀನುಗಾರ ಸಾವು

ಉಡುಪಿ: ಉಡುಪಿ ಜಿಲ್ಲೆಯ ಹೆಜಮಾಡಿ ಕೋಡಿ ಬಳಿ ಭಾರಿ ಅಲೆಯ ಹೊಡೆತಕ್ಕೆ ಸಿಲುಕಿ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಮುಳುಗಿ 46 ವರ್ಷದ ಮೀನುಗಾರರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗುರುವಾರ ಸಂಜೆ ಮೀನುಗಾರನ ಮೃತದೇಹ ದಡ ಸೇರಿದೆ ಎಂದು ಅವರು ತಿಳಿಸಿದ್ದಾರೆ.

ಗುರುವಾರ ದೋಣಿ ಮಗುಚಿ ಬಿದ್ದಿದ್ದು, ಮೃತರನ್ನು ಹೆಜಮಾಡಿ ಕೋಡಿ ನಿವಾಸಿ ಪದ್ಮನಾಭ ಸುವರ್ಣ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ದೋಣಿಯಲ್ಲಿದ್ದ ಮತ್ತೋರ್ವ ಮೀನುಗಾರ ಧೀರೇಶ್ ಬಂಗೇರ ಈಜಿ ದಡಕ್ಕೆ ಬಂದಿದ್ದಾರೆ. ಇವರಿಬ್ಬರು ಗುರುವಾರ ಬೆಳಗ್ಗೆ ಹೆಜಮಾಡಿ ಕೋಡಿಯಿಂದ ಮೀನುಗಾರಿಕೆಗೆ ತೆರಳಿದ್ದರು.

ಅವರ ದೋಣಿ ನದೀಮುಖದ ಪ್ರವೇಶ ದ್ವಾರವನ್ನು ತಲುಪುತ್ತಿದ್ದಂತೆ, ಬೃಹತ್ ಅಲೆಯೊಂದು ದೋಣಿಗೆ ಅಪ್ಪಳಿಸಿದೆ ಮತ್ತು ದೋಣಿ ಮಗುಚಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

No Comments

Leave A Comment