ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಗ್ರೇಟರ್ ನೋಯ್ಡಾ: ಇ-ರಿಕ್ಷಾದಲ್ಲಿ ಪಟಾಕಿ ಸ್ಫೋಟ, ಓರ್ವ ಸಾವು, ಮತ್ತೋರ್ವ ಗಂಭೀರ
ನವದೆಹಲಿ: ಗ್ರೇಟರ್ ನೋಯ್ಡಾದ ದಾದ್ರಿಯಲ್ಲಿ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿ ಸ್ಫೋಟಗೊಂಡು ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.
ನಿನ್ನೆ ಅಂದರೆ ಸೋಮವಾರ ಜಗನ್ನಾಥ ಯಾತ್ರೆ ಹೊರಡುತ್ತಿದ್ದ ವೇಳೆ ಇ-ರಿಕ್ಷಾದಲ್ಲಿ ಇರಿಸಲಾಗಿದ್ದ ಪಟಾಕಿಯಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಸ್ಫೋಟ ಸಂಭವಿಸಿದೆ. ಈ ಸ್ಫೋಟದ ನಂತರ, ಸುತ್ತಮುತ್ತಲ ಪ್ರದೇಶ ಮತ್ತು ವಸ್ತುಗಳೂ ಕೂಡ ಸ್ಫೋಟದ ರಭಸಕ್ಕೆ ಚಿಂದಿಯಾಗಿದೆ. ಈ ದುರ್ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಇಬ್ಬರನ್ನೂ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಈ ಪೈಕಿ ಓರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದೀಗ ಈ ಸ್ಫೋಟದ ವಿಡಿಯೋ ಸ್ಥಳೀಯ ಸಿಸಿಟಿವಿ ದಾಖಲಾಗಿದ್ದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪರ ವೈರಲ್ ಆಗಿದೆ.
ಮತ್ತೊಂದು ಘಟನೆಯಲ್ಲಿ ಇದೇ ದಾದ್ರಿ ಪೊಲೀಸ್ ಠಾಣೆ ವ್ಯಾಪ್ತಿಯ ದೌಲತ್ ರಾಮ್ ಕಾಲೋನಿ ಬಳಿ ಇರುವ ವಿದ್ಯುತ್ ಪರಿವರ್ತಕ ಸೋಮವಾರ ಸಂಜೆ ಬಿಸಿಯಾಗಿ ಸ್ಫೋಟಗೊಂಡಿದೆ. ಈ ಘಟನೆಯಲ್ಲಿ ನಾಲ್ವರು ಸುಟ್ಟು ಕರಕಲಾಗಿದ್ದಾರೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಅವರನ್ನು ಚಿಕಿತ್ಸೆಗಾಗಿ ನೋಯ್ಡಾದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.