Log In
BREAKING NEWS >
ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಪರಮೇಶ್ವರ್ ಅನಂತ್ ಹೆಗ್ಡೆ ನೇಮಕ...

ಶಾಲೆಗೆ ತೆರಳುತ್ತಿದ್ದಾಗ ಕಾರು ಢಿಕ್ಕಿ-ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಚೆನ್ನೈ:ಫೆ 28. ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಿರುಪತ್ತೂರ್ ನ ವಾಣಿಯಂಪಾಡಿನಲ್ಲಿ ಮಂಗಳವಾರ ಮುಂಜಾನೆ ನಡೆದಿದೆ.

7ನೇ ತರಗತಿಯ ವಿದ್ಯಾರ್ಥಿಗಳಾದ ವಿಜಯ್(13), ರಫೀಕ್(13) ಮತ್ತು ಸೂರ್ಯ(13) ಮೃತಪಟ್ಟವರು. ಗಿರಿಸಮುಥಿರಂನಲ್ಲಿರುವ ಸರ್ಕಾರಿ ಶಾಲೆಗೆ ತೆರಳಲು ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ವಿದ್ಯಾರ್ಥಿಗಳ ಗುಂಪು ಸೈಕಲ್‌ನಲ್ಲಿ ಸಾಗುತ್ತಿತ್ತು. ಈ ವೇಳೆ ವೆಲ್ಲೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ವೇಗವಾಗಿ ಬಂದು ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದಿದೆ. ಬಳಿಕ ಕಾರು ಮರಕ್ಕೆ ಗುದ್ದಿದೆ. ಢಿಕ್ಕಿಯ ರಭಸಕ್ಕೆ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ. ಘಟನಾ ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು ಸೇರಿದ್ದು, ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಸ್ಥಳಕ್ಕಾಗಮಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment