ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಬೀದರ್: 7 ಅಂತಸ್ತಿನ ಕಟ್ಟಡದಿಂದ ಜಿಗಿದು 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಸಾವು
ಬೀದರ್: ಬೀದರ್ ಜಿಲ್ಲೆಯಲ್ಲಿ ಮಂಗಳವಾರ 22 ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಏಳು ಅಂತಸ್ತಿನ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಶ್ರೀರಾಮ ಕ್ಯಾಡಗಿ ಎಂದು ಗುರುತಿಸಲಾಗಿದೆ.
ಪೊಲೀಸರ ಪ್ರಕಾರ, ಶ್ರೀರಾಮ ಬೀದರ್ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಬ್ರಿಮ್ಸ್) ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದನು. ಬ್ರಿಮ್ಸ್ ಹಾಸ್ಟೆಲ್‌ನಲ್ಲಿ ವಾಸವಿದ್ದ ಆತ ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶ್ರೀರಾಮ ಬೀದರ್ ಜಿಲ್ಲೆಯ ಚಿಟಗುಪ್ಪ ತಾಲೂಕಿನವನಾಗಿದ್ದು, ತಂದೆಯ ಮರಣದ ನಂತರ ಅವರು ಖಿನ್ನತೆಗೆ ಒಳಗಾಗಿದ್ದನು. ಶ್ರೀರಾಮ ಕಾಲೇಜಿನಲ್ಲಿ ಟಾಪರ್ ಆಗಿದ್ದ ಎನ್ನಲಾಗಿದೆ.
ಪ್ರಕರಣದ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಹೊಸನಗರ ಪೊಲೀಸರು ಆತನ ಹಾಸ್ಟೆಲ್ ಮೇಟ್‌ಗಳು, ಸ್ನೇಹಿತರು ಮತ್ತು ಶಿಕ್ಷಕರ ಹೇಳಿಕೆಗಳನ್ನು ದಾಖಲಿಸಿಕೊಳ್ಳುತ್ತಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.