ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ
ಪುತ್ರನ ‘ಲಂಚಾವತಾರ’ ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ
ಬೆಂಗಳೂರು: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ
.
ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು ಲೋಕಾಯುಕ್ತ ನ್ಯಾಯಾಂಗ ಬಂಧನವಾಗಿದೆ.
ಅವರ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಸಿಬ್ಬಂದಿ ರಾತ್ರಿಯಿಂದ ಇಂದು ಬೆಳಗಿನವರೆಗೆ ನಡೆಸಿದ ಸತತ ಕಾರ್ಯಾಚರಣೆ ಮತ್ತು ಶೋಧ ವೇಳೆ 6 ಕೋಟಿ ರೂಪಾಯಿ ನಗದು ಪತ್ತೆಯಾಗಿದೆ.
ಲೋಕಾಯುಕ್ತ ದಾಳಿ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿತ್ತು. ಅದಕ್ಕೆ ಇಂದು ಪ್ರತಿಕ್ರಿಯೆ ನೀಡಿದ್ದ ಸಿಎಂ ಬೊಮ್ಮಾಯಿ, ಲೋಕಾಯುಕ್ತ ಸಂಸ್ಥೆಯನ್ನು ಬಿಜೆಪಿ ಸರ್ಕಾರವೇ ಮರುಸ್ಥಾಪಿಸಿದ್ದು ಭ್ರಷ್ಟಾಚಾರ ನಿಗ್ರಹಕ್ಕೆ. ಸಮಗ್ರ ತನಿಖೆಯಾಗಿ ತಪ್ಪಿತಸ್ಥರು ಯಾರೇ ಆದರೂ ಶಿಕ್ಷೆಯಾಗುತ್ತದೆ ಎಂದಿದ್ದರು.
ಇದಾದ ಬಳಿಕ ವಿಧಾನಸಭೆ ಚುನಾವಣೆ ಹೊತ್ತಲ್ಲಿ ಪಕ್ಷಕ್ಕೆ ಮುಜುಗರವಾಗಬಾರದು ಮತ್ತು ಪ್ರತಿಪಕ್ಷಗಳ ಟೀಕೆಗೆ ಗುರಿಯಾಗಬಾರದು ಎಂಬ ಉದ್ದೇಶದಿಂದ ಸಿಎಂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಕಾರ್ಖಾನೆ(KSDL) ಅಧ್ಯಕ್ಷ ಸ್ಥಾನಕ್ಕೆ ಇಂದು ಸಾಯಂಕಾಲದೊಳಗೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸೂಚಿಸಿದ್ದರು.
ಮುಖ್ಯಮಂತ್ರಿಗಳಿಂದ ಸೂಚನೆ ಬಂದ ಕೂಡಲೇ ಮಾಡಾಳ್ ವಿರೂಪಾಕ್ಷಪ್ಪ ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ, ನನ್ನ ಮತ್ತು ನನ್ನ ಕುಟುಂಬದ ವಿರುದ್ದ ಚುನಾವಣೆ ಹೊತ್ತಿನಲ್ಲಿ ಷಡ್ಯಂತ್ರ ನಡೆಸಲಾಗಿದ್ದು, ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.