ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಮಂಗಳೂರು ಜ್ಯುವೆಲ್ಲರ್ಸ್‌ನಲ್ಲಿ ಕೊಲೆ, ದರೋಡೆ: ಕಾಸರಗೋಡಿನಲ್ಲಿ ಆರೋಪಿ ಬಂಧನ

ಕಾಸರಗೋಡು: ಮಂಗಳೂರು ನಗರದ ಜುವೆಲ್ಲರಿ ಸಿಬ್ಬಂದಿಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಕಾಸರಗೋಡು ಡಿವೈಎಸ್ಪಿ ಪಿ.ಕೆ ಸುಧಾಕರನ್ ಹಾಗೂ ಅಪರಾಧ ಪತ್ತೆದಳದ ಡಿವೈಎಸ್ಪಿ ಅಬ್ದುಲ್ ರಹೀಮ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.

ಕೋಜಿಕ್ಕೋಡ್ ಕೊಯಿಲಾಂಡಿ ತೂವಕ್ಕಾಡ್ ನ ಶಿಫಾಜ್ ( 33) ಬಂಧಿತ ಆರೋಪಿ.  ಮಂಗಳೂರಿನಲ್ಲಿ ಒಂದು ತಿಂಗಳ ಹಿಂದೆ ಜ್ಯುವೆಲ್ಲರಿ ನೌಕರನನ್ನು ಹತ್ಯೆಗೈದ ಆರೋಪಿಯನ್ನು ಕಾಸರಗೋಡು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಕೋಯಿಕ್ಕೋಡ್ ಜಿಲ್ಲೆಯ ಕೊಯಿಲಾಂಡಿ ಸಮೀಪದ ತುವಕ್ಕೋಡ್ ಮೂಲದ ಶಿಫಾಜ್ ಪಿ ಪಿ (33) ಎಂದು ಗುರುತಿಸಲಾಗಿದೆ. ಈತ ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದನು. ಈತನ ಸಿಸಿ ಟಿವಿ ದ್ರಶ್ಯಗಳನ್ನು ಮಂಗಳೂರು ಪೊಲೀಸರು ಕೇರಳ ಪೊಲೀಸರಿಗೆ ಹಸ್ತಾ೦ತರಿಸಿದ್ದರು. ಈ ಜಾಡನ್ನು ಹಿಡಿದು ತನಿಖೆ ನಡೆಸಿದ ಕಾಸರಗೋಡು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಫೆ.೩ ರಂದು ಹಂಪನಕಟ್ಟೆಯ ಜುವೆಲ್ಲರಿಯೊಂದರಲ್ಲಿ ಸಿಬ್ಬಂದಿಯಾಗಿದ್ದ ರಾಘವೇಂದ್ರ ಆಚಾರ್ಯರವರನ್ನು ಹಾಡಹಗಲೇ ಚೂರಿಯಿಂದ ಇರಿದು ಕೊಲೆ ಮಾಡಿದ್ದನು. ಕೃತ್ಯಕ್ಕೆ ಕಾರಣ ಏನೆಂಬುದು ತನಿಖೆಯಿಂದ ತಿಳಿದು ಬಾರಬೇಕಿದೆ. ಇದೀಗ ಆರೋಪಿಯನ್ನು ಮಂಗಳೂರು ಪೊಲೀಸರಿಗೆ ಹಸ್ತಾ೦ತರಿಸಲಾಗಿದೆ.

ಆರೋಪಿ ಪತ್ತೆಗೆ, ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ, ಮೊಬೈಲ್‌ ಟವರ್‌ನಲ್ಲಿ ದಾಖಲಾದ ಕರೆಗಳ ಮಾಹಿತಿ ವಿಶ್ಲೇಷಿಸಲು ಹಾಗೂ ವಿವಿಧ ಲಾಡ್ಜ್‌, ಹೋಟೆಲ್‌ಗಳನ್ನು ಪರಿಶೀಲಿಸಲು ತಂಡಗಳನ್ನು ರಚಿಸಲಾಗಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಕೇರಳ ಪೊಲೀಸರೊಂದಿಗೆ ಹಂಚಿಕೊಳ್ಳಲಾಗಿತ್ತು. ಆರೋಪಿಯನ್ನು ಕಾಸರಗೋಡಿನಲ್ಲಿ ಗುರುವಾರ ಪತ್ತೆಹಚ್ಚಲಾಗಿದೆ. ದರೋಡೆ ಉದ್ದೇಶದಿಂದ ಕೊಲೆ ಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ.

No Comments

Leave A Comment