ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಭಾರತೀಯ ಚಿತ್ರರಂಗಕ್ಕೆ ಹೊಸ ಗರಿಮೆ: ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೀಪಿಕಾ ಪಡುಕೋಣೆ ನಿರೂಪಕಿ!
ಮುಂಬಯಿ: :ಪ್ರತಿ ವರ್ಷವೂ ಒಂದಿಲ್ಲೊಂದು ಮಹತ್ವದ ಜವಾಬ್ದಾರಿಯನ್ನು ದೀಪಿಕಾ ನಿರ್ವಹಿಸುತ್ತಿದ್ದಾರೆ. 2022ನೇ ಸಾಲಿನ ಕೇನ್ಸ್ ನಲ್ಲಿ ತೀರ್ಪುಗಾರರಾಗಿ ದೀಪಿಕಾ, ಆಸ್ಕರ್ ನಲ್ಲಿ ನಿರೂಪಕಿಯಾಗಿ ಮಿಂಚಲಿದ್ದಾರೆ. ಈ ಮಾಹಿತಿಯನ್ನು ಸ್ವತಃ ದೀಪಿಕಾ ಅವರೇ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ. ಆ ದಿನಕ್ಕಾಗಿ ಕಾಯುತ್ತಿರುವುದಾಗಿಯೂ ಅವರು ತಿಳಿಸಿದ್ದಾರೆ.
ಗುರುವಾರ ರಾತ್ರಿ, ದೀಪಿಕಾ ಇನ್ ಸ್ಟಾದಲ್ಲಿ ಎಲ್ಲಾ ನಿರೂಪಕರ ಹೆಸರುಗಳೊಂದಿಗೆ ಪೋಸ್ಟ್ ಹಂಚಿಕೊಂಡಿದ್ದಾರೆ. ಇದೇ ಮಾರ್ಚ್ 12ರಂದು (ಭಾರತೀಯ ಕಾಲಮಾನದ ಪ್ರಕಾರ ಮಾರ್ಚ್ 13) ಲಾಸ್ ಏಂಜಲೀಸ್ ನಲ್ಲಿ ಆಸ್ಕರ್ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಈ ಸಮಾರಂಭದಲ್ಲಿ ಹತ್ತು ಜನ ನಿರೂಪಕರು ಕೆಲಸ ಮಾಡಲಿದ್ದಾರೆ. ಅದರಲ್ಲಿ ದೀಪಿಕಾ ಪಡುಕೋಣೆ ಕೂಡ ಒಬ್ಬರು. ದೀಪಿಕಾ ಜೊತೆ ಮೆಲಿಸ್ಸಾ ಮೆಕಾರ್ಥಿ, ಜಾನೆಲ್ಲೆ ಮೋನೆ, ಜೆನ್ನಿಫರ್ ಕೊನ್ನೆಲ್ಲಿ, ಸ್ಯಾಮ್ಯುಯೆಲ್ ಎಲ್ ಜಾಕ್ಸನ್, ಜೋ ಸಲ್ಡಾನಾ ಸೇರಿದಂತೆ ಇತರರು ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಈ ಬಾರಿ ಆಸ್ಕರ್ ವೇದಿಕೆಯ ಮೇಲೆ ನಿರಂತರವಾಗಿ ದೀಪಿಕಾ ಕಾಣಿಸಿಕೊಂಡರೆ, ರಾಮ್ ಚರಣ್ ಮತ್ತು ಜ್ಯೂನಿಯರ್ ಎನ್.ಟಿ.ಆರ್ ಲೈವ್ ಡ್ಯಾನ್ಸ್ ಮಾಡಲಿದ್ದಾರೆ. ಅಲ್ಲದೇ, ಅದೇ ವೇದಿಕೆಯಲ್ಲೇ ಗಾಯಕರಾದ ರಾಹುಲ್ ಸಿಪ್ಲಿಗುಂಜ್ ಮತ್ತು ಕಾಲಾ ಭೈರವ ಹಾಡಲಿದ್ದಾರೆ. ಭಾರತದಿಂದ ಆಲ್ ದಟ್ ಬ್ರೀಥ್ಸ್, ದಿ ಎಲಿಫೆಂಟ್ ವಿಸ್ಪರರ್ಸ್ ಕಿರುಚಿತ್ರಗಳು ನಾಮ ನಿರ್ದೇಶನಗೊಂಡಿವೆ. ಆರ್.ಆರ್.ಆರ್ ಸಿನಿಮಾದ ನಾಟು ನಾಟು ಕೂಡ ಪ್ರಶಸ್ತಿಯ ರೇಸ್ ನಲ್ಲಿದೆ.
ಆಸ್ಕರ್‌ನಲ್ಲಿ ಭಾರತಕ್ಕೆ ಇದು ವಿಶೇಷ ವರ್ಷ. ಈ ಬಾರಿ, ಕೇವಲ ಒಂದಲ್ಲ, ಮೂರು ಮಹತ್ವದ ಭಾರತೀಯ ಚಲನಚಿತ್ರಗಳು ಅಸ್ಕರ್ ಪ್ರಶಸ್ತಿಗಳು ನಾಮನಿರ್ದೇಶನಗೊಂಡಿವೆ, ಈ ವರ್ಷದ ಆರಂಭದಲ್ಲಿ ಇದೇ ವಿಭಾಗದಲ್ಲಿ ಗೋಲ್ಡನ್ ಗ್ಲೋಬ್ ಪ್ರಶಸ್ತಿಯನ್ನು ಗೆದ್ದ ನಾಟು ನಾಟು ನೃತ್ಯ ಗೀತೆಗಾಗಿ RRR ಅತ್ಯುತ್ತಮ ಮೂಲ ಗೀತೆಗಾಗಿ ಕಿರುಪಟ್ಟಿಯಲ್ಲಿದೆ.