ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಲಿದೆ. ಮತ್ತು 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ....

ಕೋವಿಡ್-19: 97 ದಿನಗಳ ಬಳಿಕ ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 300ಕ್ಕೂ ಅಧಿಕ ಸೋಂಕು ಪ್ರಕರಣ ವರದಿ

ನವದೆಹಲಿ: ಸಂಪೂರ್ಣ ಕ್ಷೀಣವಾಗಿದ್ದ ಮಾರಕ ಕೋವಿಡ್ ಸೋಂಕು 97 ದಿನಗಳ ಬಳಿಕ ಮತ್ತೆ ಭಾರತದಲ್ಲಿ ಸುದ್ದಿಗೆ ಗ್ರಾಸವಾಗಿದ್ದು, ಕಳೆದ 24 ಗಂಟೆಗಳಲ್ಲಿ 300ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ದೈನಂದಿನ ಕೋವಿಡ್ ಅಂಕಿ-ಅಂಶಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 334 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ. ಆ ಮೂಲಕ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,686ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ದೇಶದಲ್ಲಿನ ಕೋವಿಡ್ ಚೇತರಿಕೆ ಪ್ರಮಾಣ ಶೇ.98.80ರಷ್ಟಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

No Comments

Leave A Comment