ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ವೇತನ ಹೆಚ್ಚಳಕ್ಕೆ ಆಗ್ರಹ: ಮಾರ್ಚ್.24ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ನೌಕರರ ಕರೆ, ಬಸ್ ಸೇವೆ ಸ್ಥಗಿತ

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್ 24 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ಶನಿವಾರ ಕರೆ ನೀಡಿದೆ.

ಕಳೆದ ನಾಲ್ಕು ದಿನಗಳಿಂದ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದ ಸಾರಿಗೆ ನೌಕರರ ಸಮಾನ ಮನಸ್ಕರ ವೇದಿಕೆಯ ಪದಾಧಿಕಾರಿಗಳು ಶನಿವಾರ ಸಂಜೆ ಧರಣಿ ಸ್ಥಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ವೇದಿಕೆಯ ಅಧ್ಯಕ್ಷ ಚಂದ್ರಶೇಖರ್ ಅವರು ಮಾತನಾಡಿ, ಆರನೇ ವೇತನ ಆಯೋಗದ ಮಾದರಿಯಲ್ಲಿ ಸಾರಿಗೆ ನೌಕರರಿಗೆ ವೇತನ ನೀಡುವುದಾಗಿ 2021ರ ಏಪ್ರಿಲ್ ನಲ್ಲಿ ಸರ್ಕಾರ ಲಿಖಿತ ಭರವಸೆ ನೀಡಿತ್ತು. ಎರಡು ವರ್ಷ ಕಳೆದರೂ ಯಾವುದೇ ಬೇಡಿಕೆ ಈಡೇರಿಸಿಲ್ಲ. ಬಜೆಟ್ ನಲ್ಲಿಯೂ ಸಾರಿಗೆ ನೌಕರರ ಬೇಡಿಕೆಗಳ ಬಗ್ಗೆ ಉಲ್ಲೇಖಿಸಿಲ್ಲ. ಹೀಗಾಗಿ ಮುಷ್ಕರ ನಡೆಸಲಾಗುವುದು ಎಂದು ಹೇಳಿದರು.

ನೌಕರರ ಸಮಸ್ಯೆಗಳ ಪರಿಹಾರಕ್ಕೆ ವಿವಿಧ ರೀತಿಯ ಹೋರಾಟ ನಡೆಸಿದ್ದರೂ ಸ್ಪಂದಿಸಿಲ್ಲ. ಮಾರ್ಚ್ 1 ರಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರೂ, ಯಾವೊಬ್ಬ ಅಧಿಕಾರಿ, ಜನಪ್ರತಿನಿಧಿ ಸ್ಥಳಕ್ಕೆ ಬಂದು ಸಮಸ್ಯೆ ಆಲಿಸಿಲ್ಲ. ಹೀಗಾಗಿ ಮಾರ್ಚ್ 24 ರಿಂದ ಬಸ್ ಸೇವೆ ಸ್ಥಗಿತಗೊಳಿಸಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.

kiniudupi@rediffmail.com

No Comments

Leave A Comment