ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಪುತ್ತೂರು: ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ – ಮತ್ತೋರ್ವ ಆರೋಪಿ ಎನ್ಐಎ ವಶಕ್ಕೆ

ಮಂಗಳೂರು:ಮಾ. 05, ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಮತ್ತೋರ್ವ ಅರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಬಂಧಿಸಿದೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ.

2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹತ್ತು ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ.

ಇನ್ನು ತುಫೈಲ್ ಸುಳಿವು ನೀಡಿದವರಿಗೆ ಐದು ಲಕ್ಷ ರೂ ಇನಾಮು ಘೋಷಿಸಲಾಗಿದ್ದು, ಇದೀಗ ಆತನನ್ನು ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ.

No Comments

Leave A Comment