ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ವಲಸೆ ಕಾರ್ಮಿಕರ ವಿರುದ್ಧ ಹೇಳಿಕೆ – ಅಣ್ಣಾಮಲೈ ವಿರುದ್ಧ ಪ್ರಕರಣ ದಾಖಲಿಸಿದ ಸಿಸಿಬಿ

ಚೆನ್ನೈ:ಮಾ 05 . ವಲಸೆ ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಚೋದನಕಾರಿ ಭಾಷಣಕ್ಕಾಗಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಚೆನ್ನೈನ ಸೆಂಟ್ರಲ್ ಕ್ರೈಮ್ ಬ್ರಾಂಚ್ (ಸಿಸಿಬಿ) ಸೈಬರ್ ಕ್ರೈಂ ವಿಭಾಗ ಪ್ರಕರಣ ದಾಖಲಿಸಿದೆ ಎಂದು ವರದಿಯಾಗಿದೆ.

ಪೊಲೀಸ್ ಮೂಲಗಳ ಪ್ರಕಾರ, ಭಾರತೀಯ ದಂಡ ಸಂಹಿತೆಯ (ಐಪಿಸಿ) ಪ್ರಕಾರ, ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ), 153A(1)(a) (ವಿವಿಧ ಪ್ರಾದೇಶಿಕ/ಭಾಷೆ/ಜಾತಿ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವುದು), 505(1)(b) (ಸಾರ್ವಜನಿಕವಾಗಿ ಭಯ ಉಂಟುಮಾಡುವ ಉದ್ದೇಶ) ಮತ್ತು 505(1)(ಸಿ) (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಜಾತಿಯ ಆಧಾರದ ಮೇಲೆ ಅಶಾಂತಿಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಉದ್ದೇಶದಿಂದ ವದಂತಿ ಅಥವಾ ಆತಂಕಕಾರಿ ಸುದ್ದಿಗಳನ್ನು ಹೊಂದಿರುವ ಯಾವುದೇ ಹೇಳಿಕೆ ಅಥವಾ ವರದಿಯನ್ನು ಮಾಡುವವರು, ಪ್ರಕಟಿಸುವವರು ಅಥವಾ ಪ್ರಸಾರ ಮಾಡುವವರು) ಪ್ರಕರಣ ದಾಖಲಿಸಲಾಗಿದೆ.

No Comments

Leave A Comment