ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಬಿಜೆಪಿ, ಕಾಂಗ್ರೆಸ್‌ನಿಂದ ಸಮಾನ ಅಂತರ ಕಾಯ್ದುಕೊಳ್ಳಲು ಟಿಎಂಸಿ ನಿರ್ಧಾರ

ಕೋಲ್ಕತ್ತಾ: ಈಶಾನ್ಯ ರಾಜ್ಯಗಳಲ್ಲಿ ಹೀನಾಯ ಸೋಲಿನಿಂದ ಎಚ್ಚೆತ್ತ ತೃಣಮೂಲ ಕಾಂಗ್ರೆಸ್‌, ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಸಮಾನ ಅಂತರ ಕಾಯ್ದುಕೊಳ್ಳಲು ಮತ್ತು ಈ ಎರಡೂ ಪಕ್ಷಗಳನ್ನು ವಿರೋಧಿಸುವ ಪ್ರಾದೇಶಿಕ ಪಕ್ಷಗಳೊಂದಿಗೆ ಕೈಜೋಡಿಸಲು ಮುಂದಾಗಿದೆ.

ತ್ರಿಪುರಾದಲ್ಲಿ ಟಿಎಂಸಿ ನೋಟಾ ಪಡೆದ ಮತಗಳಿಗಿಂತ ಕಡಿಮೆ ಮತ ಪಡೆದಿದ್ದು, ಮೇಘಾಲಯದಲ್ಲೂ ಪಕ್ಷದ ಶಾಸಕರ ಸಂಖ್ಯೆ 11 ರಿಂದ ಐದಕ್ಕೆ ಇಳಿದಿದೆ.

ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಈಗಾಗಲೇ 2024 ರ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ್ದಾರೆ.

ಪ್ರತಿಪಕ್ಷಗಳ ಮತಗಳನ್ನು ವಿಭಜಿಸುವ ಮೂಲಕ ಟಿಎಂಸಿ ಬಿಜೆಪಿಗೆ ಸಹಾಯ ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಸಿಪಿಐ(ಎಂ) ನಾಯಕರು ಆರೋಪಿಸಿದ ಬೆನ್ನಲ್ಲೇ ಟಿಎಂಸಿಯ ಈ ನಿರ್ಧಾರ ಹೊರಬಿದ್ದಿದೆ.

No Comments

Leave A Comment