ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಭುವನೇಶ್ವರ: ಒಡಿಶಾದ ಖುರ್ದಾದ ತಂಗಿ ಪೊಲೀಸ್ ವ್ಯಾಪ್ತಿಯ ಭೂಶುಂದಪುರ ಗ್ರಾಮದ ಬಳಿ ಪಟಾಕಿ ತಯಾರಿಕೆ ಘಟಕದಲ್ಲಿ ಸೋಮವಾರ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರಿಗೆ ಗಂಭೀರ ಗಾಯಗಳಾಗಿವೆ.
ಮೃತರೆಲ್ಲರೂ ಪುರುಷರಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಖುರ್ದಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸಿದ್ಧಾರ್ಥ್ ಕಟಾರಿಯಾ ತಿಳಿಸಿದ್ದಾರೆ.
ಗಾಯಾಳುಗಳನ್ನು ಚಿಕಿತ್ಸೆಗಾಗಿ ಖುರ್ದಾ ಜಿಲ್ಲಾ ಪ್ರಧಾನ ಆಸ್ಪತ್ರೆಗೆ (ಡಿಎಚ್‌ಹೆಚ್) ದಾಖಲಿಸಲಾಗಿದೆ ಅವರಲ್ಲಿ ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಶೀಘ್ರದಲ್ಲೇ ಭುವನೇಶ್ವರದ ಏಮ್ಸ್‌ಗೆ ದಾಖಲಿಸಲಾಗುವುದು ಎಂದು ಕಟಾರಿಯಾ ಹೇಳಿದ್ದರಾರೆ.
ವರದಿಗಳ ಪ್ರಕಾರ, ಗ್ರಾಮದಿಂದ ಸುಮಾರು 500 ಮೀಟರ್ ದೂರದಲ್ಲಿರುವ ಮನೆಯೊಂದರಲ್ಲಿ ಕೆಲವರು ಡೋಲಾ ಪೂರ್ಣಿಮಾ ಮತ್ತು ಹೋಳಿಗೆ ಮುಂಚಿತವಾಗಿ ಪಟಾಕಿಗಳನ್ನು ತಯಾರಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಆರಂಭಿಸಿದ್ದಾರೆ. ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಪೊಲೀಸ್ ತಂಡ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ.
ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲವಾದರೂ, ನಿರ್ಲಕ್ಷ್ಯವೇ ಈ ಮಾರಣಾಂತಿಕ ಘಟನೆಗೆ ಕಾರಣ ಎಂದು ಅಗ್ನಿಶಾಮಕ ಸಿಬ್ಬಂದಿ ಭಾವಿಸಿದ್ದಾರೆ.