Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....ಮಾ.21,22 ಕಾಪು ಸುಗ್ಗಿ ಮಾರಿಪೂಜೆ ದಿನ ನಿಗದಿ....

ಡಬ್ಲ್ಯುಪಿಎಲ್: ಮುಂಬೈ ವಿರುದ್ಧ ಆರ್ ಸಿಬಿಗೆ ಸೋಲು!

ಮುಂಬೈ: ಬ್ರೆಬೋರ್ನ್ ಕ್ರೀಡಾಂಗಣದಲ್ಲಿ ನಡೆದ ಡಬ್ಲ್ಯುಪಿಎಲ್  ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್ ಸಿಬಿ ತಂಡವನ್ನು 9 ವಿಕೆಟ್ ಗಳಿಂದ ಮಣಿಸಿದ್ದು, 2 ನೇ ಗೆಲುವನ್ನು ದಕ್ಕಿಸಿಕೊಂಡಿದೆ.

ಸ್ಮೃತಿ ಮಂದಾನ ನಾಯಕತ್ವದ ಆರ್ ಸಿಬಿ ನಿಗದಿತ 20 ಓವರ್ ಗಳಲ್ಲಿ ತಂಡ 156 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನತ್ತಿದ ಮುಂಬೈ ತಂಡ 14.2 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿ ಜಯವನ್ನು ತನ್ನದಾಗಿಸಿಕೊಂಡಿತು.

ಹರ್ಮನ್ ಪ್ರೀತ್ ಕೌರ್ ನಾಯಕತ್ವದ ಮುಂಬೈ ತಂಡದ ಪರ ಹೇಯ್ಲಿ ಮ್ಯಾಥ್ಯೂಸ್ ಆಲ್ ರೌಂಡರ್ ಆಟ ಪ್ರದರ್ಶಿಸಿದರು. ಬ್ಯಾಟಿಂಗ್ ವಿಭಾಗದಲ್ಲಿ ಅಜೇಯ 77 ರನ್ ಗಳಿಸಿದರೆ, ನತಾಲಿ ಸಿವರ್ ಬ್ರಂಟ್ (ಅಜೇಯ 55 ರನ್ ಗಳಿಸಿ ತಂಡದ ಗೆಲುವಿನ ಹಾದಿಯನ್ನು ಸುಗಮಗೊಳಿಸಿದರು.

ಆರಂಭಿಕ ಆಟಗಾರ್ತಿಯಾದ ಭಾಟಿಯಾ 23 ರನ್ ಗಳಿಸಿ ವಿಕೆಟ್ ಒಪ್ಪಿಸಿದ ಬಳಿಕ ಹೇಯ್ಲಿ- ನತಾಲಿ 114 ರನ್ ಗಳ ಅದ್ಭುತ ಇನ್ನಿಂಗ್ಸ್ ಕಟ್ಟಿದ್ದು ವಿಶೇಷವಾಗಿತ್ತು.

ಮುಂಬೈ ಇಂಡಿಯನ್ಸ್ ತಂಡಕ್ಕೆ ಇದು 2 ನೇ ಗೆಲುವಾಗಿದ್ದರೆ, ಆರ್ ಸಿಬಿ ತನ್ನ ಮೊದಲ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್ ಗಳಿಂದ ಸೋಲುಕಂಡಿತ್ತು.

No Comments

Leave A Comment