ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಕಣ್ಣೂರು: ವಿಮಾನದ ಟಾಯ್ಲೆಟ್‌ನಲ್ಲಿ 1.42 ಕೋಟಿ ರೂ. ಮೌಲ್ಯದ ಚಿನ್ನ ಪತ್ತೆ
ಕಣ್ಣೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಮಾನದ ಟಾಯ್ಲೆಟ್‌ನಲ್ಲಿ ಭಾರೀ ಮೌಲ್ಯದ ಚಿನ್ನವನ್ನು ಡಿಆರ್‌ಐ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.
ಅಬುಧಾಬಿಯಿಂದ ಕೇರಳದ ಕಣ್ಣೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ‘ಗೋ ಫಸ್ಟ್’ ವಿಮಾನದ ಟಾಯ್ಲೆಟ್‌ನಲ್ಲಿ 2,536 ಗ್ರಾಂ ಚಿನ್ನ ಪತ್ತೆಯಾಗಿದೆ. ಸುಮಾರು 1.42 ಕೋಟಿ ರೂ. ಬೆಲೆಬಾಳುವ ಚಿನ್ನವನ್ನು ಕಪ್ಪು ಬಟ್ಟೆಯಿಂದ ಸುತ್ತಲಾಗಿತ್ತು. ರಹಸ್ಯ ಮಾಹಿತಿ ಆಧರಿಸಿ ಡಿಆರ್‌ಐ ಕೊಚ್ಚಿ ಘಟಕ ನಡೆಸಿದ ತಪಾಸಣೆಯಲ್ಲಿ ಚಿನ್ನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಚಿನ್ನ ಕಳ್ಳಸಾಗಣೆ ಮಾಡಿದವರ ಪತ್ತೆಗೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.