ಚಿಕ್ಕಮಗಳೂರು: ಡಿಸೆಂಬರ್ 14 ರಂದು ದತ್ತಮಾಲಾ ಧಾರಿಗಳಿಂದ ದತ್ತ ಪಾದುಕೆ ದರ್ಶನ, ಜಿಲ್ಲೆಯಲ್ಲಿ ಹೈ ಅಲರ್ಟ್
ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಅಪಘಾತ – ಇಬ್ಬರು ಸ್ಥಳದಲ್ಲೇ ಮೃತ್ಯು
ಪಡುಬಿದ್ರಿ:ಮಾ 07, ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ಮೂಲ್ಕಿ ಸೇತುವೆ ಮೇಲೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮೂಲ್ಕಿ ಸೇತುವೆಯಲ್ಲಿ ಈ ಘಟನೆ ನಡೆದಿದ್ದು, ಆಕ್ಟೀವ ವಾಹನವು ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದು, ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಟ್ಯಾಂಕರ್ ಇಬ್ಬರ ತಲೆಯ ಮೇಲೆ ಹರಿದ ಪರಿಣಾಮ ತೀರ್ಥಹಳ್ಳಿ ಮೂಲದ ದಂಪತಿಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.