Log In
BREAKING NEWS >
Nandini Milk: ಕೆಎಂಎಫ್ ನಂದಿನಿ ಮಿಲ್ಕ್ ಹೊಸ ದಾಖಲೆ​​: ಒಂದೇ ದಿನ 51 ಲಕ್ಷ ಲೀಟರ್ ಹಾಲು ಮಾರಾಟ....

ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಹಣಕ್ಕೆ ನಮ್ಮ ಬಳಿ ದಾಖಲೆ ಇದೆ, ವಾಪಸ್ ಪಡೆಯುತ್ತೇವೆ: ಮಾಡಾಳ್ ವಿರೂಪಾಕ್ಷಪ್ಪ

ದಾವಣಗೆರೆ: ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್‌ ಮಾಜಿ ಅಧ್ಯಕ್ಷ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್‌ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿಯ ಚನ್ನೇಶಪುರದ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ.

ಅದ್ಧೂರಿ ಸ್ವಾಗತ: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಮಾಡಾಳ್‌ ವಿರೂಪಾಕ್ಷಪ್ಪ ಅವರು ಆರು ದಿನಗಳ ನಂತರ ತಮ್ಮ ಹುಟ್ಟೂರು ಚನ್ನೇಶಪುರದ ನಿವಾಸಕ್ಕೆ ವಾಪಸ್‌ ಆಗಿದ್ದು, ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದ್ದಾರೆ. ಅಲ್ಲದೇ ಕಾರಿನಲ್ಲಿ ಮೆರವಣಿಗೆ ಮಾಡಿದ್ದಾರೆ.

ಮೆರವಣಿಗೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಡಾಳ್ ವಿರೂಪಾಕ್ಷಪ್ಪ, ನಾನು ಯಾವುದೇ ತಪ್ಪು ಮಾಡಿಲ್ಲ. ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಎಲ್ಲಾ ಹಣಕ್ಕೂ ನಮ್ಮ ಬಳಿ ಸೂಕ್ತ ದಾಖಲೆ ಇದೆ. ಆ ಹಣವನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.

ನನ್ನ ವಿರುದ್ಧ ಯಾರೋ ಷಡ್ಯಂತ್ರ ನಡೆಸಿದ್ದಾರೆ. ಒಂದು ಆಡಳಿತ ಪಕ್ಷದ ಶಾಸಕರ ಮೇಲೆ ದಾಳಿ ನಡೆದಿದ್ದು ಇತಿಹಾಸದಲ್ಲೇ ಮೊದಲು ಎಂದು ಮಾಡಾಳ್ ವಿರೂಪಾಕ್ಷಪ್ಪ ಅವರು ಹೇಳಿದ್ದಾರೆ.

No Comments

Leave A Comment