ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಕರೆ ಕೊಟ್ಟಿದ್ದ ‘ಕರ್ನಾಟಕ ಬಂದ್ ‘ ರದ್ದು!
ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ನಾಯಕರು ಮಾರ್ಚ್ 9 ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ರದ್ದಾಗಿದೆ.
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ವಿರುದ್ಧ ನಾಳೆ ಬೆಳಿಗ್ಗೆ 9 ರಿಂದ 11ಗಂಟೆವರೆಗೆ ಅಂದರೆ ಎರಡು ಗಂಟೆಗಳ ಕಾಲ ಬಂದ್ ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು.
ಆದರೆ ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಆರಂಭವಾಗಲಿದ್ದು, ಸಾರ್ವಜನಿಕರಿಗೆ ಅನಾನುಕೂಲವಾಗುವ ಹಿನ್ನೆಲೆ ಬಂದ್ ಕಾಂಗ್ರೆಸ್ ನಾಯಕರು ಹಿಂಪಡೆದಿದ್ದಾರೆ.
ಬಿಜೆಪಿ ಶಾಸಕ ಮಾಡಾಳು ವಿರುಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಸಿಲುಕಿದ ಬೆನ್ನಲ್ಲೇ ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ ಕಾಂಗ್ರೆಸ್, ಮಾರ್ಚ್ 9 ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್ ರದ್ದಾಗಿದೆ.
ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಹಾಗೂ ಬಿಕೆ ಹರಿಪ್ರಸಾದ್ ಸೇರಿದಂತೆ ಇನ್ನಿತರ ನಾಯಕರು ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ್ದು, ಪಿಯುಸಿ ಪರೀಕ್ಷೆ ಇರುವುದರಿಂದ ಬಂದ್ ವಾಪಸ್ ಪಡೆದುಕೊಂಡಿದೆ. ಮಾಡಾಳ್ ವಿರೂಪಾಕ್ಷಪ್ಪ ಲೋಕಾಯುಕ್ತ ಪ್ರಕರಣವನ್ನು ಭಾರೀ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್, ಮಾರ್ಚ್ 9ರಂದು ರಾಜ್ಯಾದ್ಯಂತ 2 ಗಂಟೆ ಬಂದ್ಗೆ ಕರ್ನಾಟಕ ಕಾಂಗ್ರೆಸ್ ಕರೆ ಕೊಟ್ಟಿತ್ತು.
ಕಾಂಗ್ರೆಸ್ ಬಂದ್ಗೆ ವಿರೋಧಗಳು ವ್ಯಕ್ತವಾಗಿದ್ದವು. ತಮ್ಮ ಬೇಳೆ ಬೇಯಿಸಿಕೊಳ್ಳಲು ಸಾರ್ವಜನಿಕರಿಗೆ ತೊಂದರೆ ಏಕೆ ಕೊಡುತ್ತೀರಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಗಳು ವ್ಯಕ್ತವಾಗಿದ್ದವು. ಇನ್ನು ಮಾರ್ಚ್ 09ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಇರುವುದರಿಂದ ವಿದ್ಯಾರ್ಥಿಗಳು ತೊಂದರೆಯಾಗಿಲಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು.