ಅಂತಾರಾಷ್ಟ್ರೀಯ ಮಹಿಳಾ ದಿನ: ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಬೊಮ್ಮಾಯಿ
ಬೆಂಗಳೂರು: ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪುರುಷರನ್ನೊಳಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ರವೀಂದ್ರ ಕಲಾಕ್ಷೇತ್ರ ಕನ್ನಡ ಭವನದಲ್ಲಿ ಆಯೋಜಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿಎಂ ಬೊಮ್ಮಾಯಿ ಅವರು ಸಾಧಕಿಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ಪುರುಷರಿಗೆ ಜಾಗೃತಿ ಅಗತ್ಯ
ತಾಯಿಯೊಂದಿಗೆ ಜನ್ಮಪೂರ್ವದ ಸಂಬಂಧವಿದ್ದು, ಇದೊಂದು ಪವಿತ್ರ ಸಂಬಂಧ. ಮನುಕುಲದ ಮುಂದುವರಿಕೆ ನಿರಂತರವಾಗಿ ತಾಯಿಂದಿರು ಮಾಡಿದ್ದಾರೆ. ನಮ್ಮ ತಾಯಿ, ಮಕ್ಕಳು, ಪತ್ನಿಯಿಂದ ಸದಾ ಸೇವೆ ಪಡೆಯುವುದು ಪುರುಷ. ಮಹಿಳೆಗೆ ತೊಂದರೆಯಾದರೆ ಅದು ಗಂಡು ಮಕ್ಕಳಿಂದ, ಹೀಗಾಗಿ ಗಂಡು ಮಕ್ಕಳಿಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕು. ಜಗತ್ತಿನ ಎಲ್ಲಾ ದೇಶಗಳಲ್ಲಿ ಮಹಿಳೆಯರನ್ನು ಒಗ್ಗೂಡಿಸಿ ಅವರ ಸುರಕ್ಷತೆ ಹಾಗೂ ಆರ್ಥಿಕ ಸ್ವಾತಂತ್ರ್ಯ ನೀಡಿ ಸಬಲರನ್ನಾಗಿ ಮಾಡಲು ಸಂಯುಕ್ತ ರಾಷ್ಟ್ರ ತೀರ್ಮಾನ ಮಾಡಿ ಈ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮಹಿಳೆಯರ ಸಾಧನೆ