ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬಿಎಂಟಿಸಿ ಬಸ್ ನಲ್ಲಿ ಬೆಂಕಿ, ಕಂಡಕ್ಟರ್ ಸಜೀವ ದಹನ

ಬೆಂಗಳೂರು: ಬಿಎಂಟಿಸಿ ಬಸ್​​ನಲ್ಲಿ ಹಠಾತ್  ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್  ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ  ನಡೆದಿದೆ.

 45 ವರ್ಷದ ಮುತ್ತಯ್ಯಸ್ವಾಮಿ ಮೃತಪಟ್ಟ ದುರ್ದೈವಿಯಾಗಿದ್ದಾರೆ.  ಲಿಂಗಧೀರನಹಳ್ಳಿ ಬಿಎಂಟಿಸಿ ಬಸ್​ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ.  ಬಸ್​ನಲ್ಲೇ ಮಲಗಿದ್ದ ಕಂಡಕ್ಟರ್​ ಸುಟ್ಟು ಕರಕಲಾಗಿದ್ದಾರೆ. ಅದೃಷ್ಟವಶಾತ್  ಬಸ್​ ​ಚಾಲಕ ಪ್ರಕಾಶ್  ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸುಮ್ಮನಹಳ್ಳಿ ಡಿಪೋ-31ಗೆ ಸೇರಿದ ಬಸ್​ನಲ್ಲಿ  ಮುತ್ತಯ್ಯಸ್ವಾಮಿ ಕಾರ್ಯನಿರ್ವಹಿಸುತ್ತಿದ್ದರು. ರಾತ್ರಿ ಲಿಂಗದೀರನಹಳ್ಳಿ ಬಸ್​ ನಿಲ್ದಾಣದಲ್ಲಿ ಬಸ್​ನಲ್ಲೇ ಚಾಲಕ ಹಾಗೂ ನಿರ್ವಾಹಕ ಮಲಗಿದ್ದರು. ಆದ್ರೆ, ಚಾಲಕ ಬೆಳಗ್ಗೆ ಎದ್ದು ಶೌಚಾಲಯಕ್ಕೆ ಹೋದಾಗ ಈ ದುರ್ಘಟನೆ ಸಂಭವಿಸಿದೆ.   ಘಟನಾ ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ನಿರ್ವಾಹಕ ಮುತ್ತಯ್ಯಸ್ವಾಮಿ ಮೂಲತಃ ಗದಗ ಜಿಲ್ಲೆಯ ಹಾಲೂರಿನವರು. ಸದ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

No Comments

Leave A Comment