ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಸುಮಲತಾ ಅಂಬರೀಷ್ ಅವರು ಇಂದು ತಮ್ಮ ನಿರ್ಧಾರ ಪ್ರಕಟಿಸುತ್ತಾರೆ: ಸಿಎಂ ಬೊಮ್ಮಾಯಿ, ಮಂಡ್ಯದಲ್ಲಿಯೇ ಎಲ್ಲ ಹೇಳುತ್ತೇನೆ ಎಂದ ಸಂಸದೆ
ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಇವತ್ತು ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ನಿರ್ಧಾರ ಪ್ರಕಟಿಸುತ್ತಾರೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸುಳಿವು ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಿನ್ನೆ ನಮ್ಮ ನಾಯಕರೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ. ಅದರಲ್ಲಿ ಒಂದು ನಿರ್ಧಾರಕ್ಕೆ ಬಂದಿದ್ದಾರೆ, ಇವತ್ತು ಅದನ್ನು ಬಹಿರಂಗಪಡಿಸಲಿದ್ದಾರೆ ಎಂದು ಹೇಳುವ ಮೂಲಕ ಮಂಡ್ಯ ಸೊಸೆ ಕಮಲ ಮುಡಿಯುವುದು ಖಚಿತ ಎಂದು ಪರೋಕ್ಷವಾಗಿ ಸಿಎಂ ಹೇಳಿದ್ದಾರೆ.
ಇಂದು ಬೆಳಗ್ಗೆ ತಮ್ಮ ಪುತ್ರ ಅಭಿಷೇಕ್ ಅಂಬರೀಷ್ ಜೊತೆ ಮಂಡ್ಯಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳು ಕೇಳಿದಾಗ ಸುಮಲತಾ, ಮಂಡ್ಯಕ್ಕೆ ಹೋದ ಮೇಲೆ ಎಲ್ಲವನ್ನೂ ಹೇಳುತ್ತೇನೆ, ನಾನು ಇವತ್ತು ರಾಜಕೀಯವಾಗಿ ಏನೇ ಆಗಿದ್ದರೂ, ಏನೇ ಗುರುತಿಸಿಕೊಂಡಿದ್ದರೂ ಮಂಡ್ಯ ಜಿಲ್ಲೆ, ಮಂಡ್ಯ ಜನತೆಯೇ ಕಾರಣ, ಹೀಗಾಗಿ ಅವರ ಸಮ್ಮುಖದಲ್ಲಿಯೇ ನಿರ್ಧಾರ ಪ್ರಕಟಿಸುತ್ತೇನೆ ಎಂದರು.