Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಕುಟುಂಬ, ಆರ್‌ಜೆಡಿ ನಾಯಕರಿಗೆ ಸೇರಿದ ಜಾಗದಲ್ಲಿ ಇ.ಡಿ ಶೋಧ

ನವದೆಹಲಿ: ಉದ್ಯೋಗಕ್ಕಾಗಿ ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಬಿಹಾರದ ಅನೇಕ ನಗರಗಳು ಮತ್ತು ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರ ಮೂವರು ಪುತ್ರಿಯರು ಹಾಗೂ ಆರ್‌ಜೆಡಿ ನಾಯಕರಿಗೆ ಸೇರಿದ ಸ್ಥಳಗಳು ಸೇರಿದಂತೆ ಇತರ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿತು.

ಲಾಲು ಪ್ರಸಾದ್ ಅವರ ಪುತ್ರಿಯರಾದ ರಾಗಿಣಿ ಯಾದವ್, ಚಂದಾ ಯಾದವ್ ಮತ್ತು ಹೇಮಾ ಯಾದವ್ ಮತ್ತು ಮಾಜಿ ಆರ್‌ಜೆಡಿ ಶಾಸಕ ಅಬು ದೋಜಾನಾ ಅವರಿಗೆ ಸಂಬಂಧಿಸಿದ ಪಾಟ್ನಾ, ಫುಲ್ವಾರಿ ಷರೀಫ್, ದೆಹಲಿ-ಎನ್‌ಸಿಆರ್, ರಾಂಚಿ ಮತ್ತು ಮುಂಬೈ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ತಮ್ಮ ಕುಟುಂಬಕ್ಕೆ ಜಮೀನನ್ನು ಉಡುಗೊರೆಯಾಗಿ ನೀಡಿದವರು ಅಥವಾ ಅಗ್ಗದ ದರದಲ್ಲಿ ಮಾರಾಟ ಮಾಡಿದ್ದ ಕುಟುಂಬಗಳಿಗೆ ರೈಲ್ವೆಯಲ್ಲಿ ಉದ್ಯೋಗ ನೀಡಿದ್ದರು ಎಂಬ ಆರೋಪವಿದೆ.

ಲಾಲು ಪ್ರಸಾದ್, ಅವರ ಪತ್ನಿ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಮತ್ತು ಇತರ 14 ಜನರ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದ್ದು, ಮಾರ್ಚ್ 15 ರಂದು ವಿಚಾರಣೆಗೆ ಬರುವಂತೆ ಎಲ್ಲಾ ಆರೋಪಿಗಳಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಳಿಕ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಇ.ಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.

ಈ ಪ್ರಕರಣದಲ್ಲಿ ಲಾಲು ಪ್ರಸಾದ್ ಮತ್ತು ರಾಬ್ರಿ ದೇವಿ ಇಬ್ಬರನ್ನೂ ಸಿಬಿಐ ಇತ್ತೀಚೆಗೆ ವಿಚಾರಣೆಗೆ ಒಳಪಡಿಸಿತ್ತು.

No Comments

Leave A Comment