ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಆಸ್ಟ್ರೇಲಿಯಾದಲ್ಲಿ ದೇವಸ್ಥಾನಗಳ ಮೇಲೆ ದಾಳಿ: ಆಸೀಸ್ ಪ್ರಧಾನಿ ಬಳಿ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಆಸ್ಟ್ರೇಲಿಯಾ ಪ್ರಧಾನಿ ಆಂಟೋನಿ ಅಲ್ಬನೀಸ್ ಅವರೊಂದಿಗೆ ಆಸ್ಟ್ರೇಲಿಯಾದಲ್ಲಿ ಇತ್ತೀಚಿಗೆ ದೇವಾಲಯಗಳ ಮೇಲೆ ನಡೆದ ದಾಳಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಉಭಯ ದೇಶಗಳ ನಡುವಿ ಸಂಬಂಧಗಳನ್ನು ವಿಸ್ತರಿಸುವ ಗುರಿ ಹೊಂದಿರುವ ಸಂವಾದದ ವೇಳೆ ದೇವಸ್ಥಾನಗಳ ಮೇಲಿನ ದಾಳಿಯ ವಿಷಯ ಚರ್ಚೆಗೆ ಬಂದಿತು.

“ನಾನು ಈ ಭಾವನೆಗಳನ್ನು ಮತ್ತು ಕಳವಳಗಳನ್ನು ಆಸ್ಟ್ರೇಲಿಯಾ ಪ್ರಧಾನಿ ಅಲ್ಬನೀಸ್ ಅವರಿಗೆ ತಿಳಿಸಿದ್ದೇನೆ ಮತ್ತು ಭಾರತೀಯ ಸಮುದಾಯದ ಸುರಕ್ಷತೆಯು ಅವರಿಗೆ ವಿಶೇಷ ಆದ್ಯತೆಯಾಗಿದೆ ಎಂದು ತಮಗೆ ಭರವಸೆ ನೀಡಿದ್ದಾರೆ” ಎಂದು ಪ್ರಧಾನಿ ಮೋದಿ, ಆಸೀಸ್ ಪ್ರಧಾನಿ ಸಮ್ಮುಖದಲ್ಲಿ ಹೇಳಿದ್ದಾರೆ.

“ನಮ್ಮ ತಂಡಗಳು ಈ ವಿಷಯದಲ್ಲಿ ನಿಯಮಿತವಾಗಿ ಸಂಪರ್ಕದಲ್ಲಿರುತ್ತವೆ ಮತ್ತು ಸಾಧ್ಯವಾದಷ್ಟು ಸಹಕರಿಸುತ್ತವೆ” ಎಂದು ಅವರು ತಿಳಿಸಿದ್ದಾರೆ.

No Comments

Leave A Comment