ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬಿಜೆಪಿ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಎರಡರಿಂದಲೂ ಸಚಿವ ವಿ.ಸೋಮಣ್ಣ ಔಟ್!

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಬಿಜೆಪಿಯ ತಂತ್ರಗಾರಿಕೆ ಜೋರಾಗಿದೆ. ಚುನಾವಣೆ ಎದುರಿಸಲು ಹೊಸ ತಂಡವನ್ನ ರಚಿಸಿದ್ದು, ಕಮಲ ನಾಯಕರ ಹೆಗಲಿಗೆ ಪ್ರಮುಖ ಜವಾಬ್ದಾರಿ ವಹಿಸಲಾಗಿದೆ.

ಕರ್ನಾಟಕ ಬಿಜೆಪಿಯ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಗೆ ಅಧ್ಯಕ್ಷರು, ಸಂಚಾಲಕರನ್ನ ನೇಮಿಸಲಾಗಿದೆ. ಪ್ರಚಾರ ಸಮಿತಿಗೆ 25 ಸದಸ್ಯರು, ಚುನಾವಣಾ ನಿರ್ವಹಣಾ ಸಮಿತಿಯಲ್ಲಿ 14 ಸದಸ್ಯರನ್ನ ನೇಮಕ ಮಾಡಲಾಗಿದೆ.

ಸಿಎಂ ಬಸವರಾಜ ಬೊಮ್ಮಾಯಿ ಅವರನ್ನ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ನೇಮಿಸಲಾಗಿದೆ. ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ನೇಮಿಸಲಾಗಿದೆ. ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿ ಎರಡಲ್ಲೂ ಸಚಿವ ವಿ.ಸೋಮಣ್ಣರಿಗೆ ಸ್ಥಾನಮಾನ ಸಿಕ್ಕಿಲ್ಲ.

No Comments

Leave A Comment