ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಕಾಪು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ – ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು

ಕಾಪು:ಮಾ 11. ಖಾಸಗಿ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಶನಿವಾರ ಬೆಳಗ್ಗೆ ನಡೆದಿದೆ.

ಕಾಪು ಮಹಾದೇವಿ ಪ್ರೌಢಶಾಲೆಯ ಎಂಟನೇ ತರಗತಿ ವಿದ್ಯಾರ್ಥಿನಿ ವರ್ಷಿತಾ ಶೇರ್ವೆಗಾರ (13) ಮೃತ ವಿದ್ಯಾರ್ಥಿನಿ.

ಶನಿವಾರ ಬೆಳಗ್ಗೆ ಶಾಲೆಗೆ ಬರುತ್ತಿದ್ದ ಆಕೆ ರಾಷ್ಟ್ರೀಯ ಹೆದ್ದಾರಿ 66ರ ಮಂದಾರ ಹೊಟೇಲ್ ಬಳಿ ರಸ್ತೆ ದಾಟಲು ನಿಂತಿದ್ದ ವೇಳೆ ಉಡುಪಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಬಾಲಕಿಯ ತಲೆಗೆ ಗಂಭೀರ ಏಟಾಗಿದ್ದು ಗಂಭೀರ ಗಾಯಗೊಂಡಿರುವ ಆಕೆಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ.

ಕಾಪು ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಖಾಸಗಿ ಬಸ್ ಅನ್ನು ವಶಕ್ಕೆ ತೆಗೆದುಕೊಂಡು ತನಿಖೆ ಮುಂದುವರಿಸಿದ್ದಾರೆ.

No Comments

Leave A Comment