ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಶಾಂತಿ- ಸುವ್ಯವಸ್ಥೆ: ದಕ್ಷಿಣ ಕನ್ನಡ ಜಿಲ್ಲೆಯಿಂದ 11 ಮಂದಿ ಗಡಿಪಾರು; ಜಿಲ್ಲಾಧಿಕಾರಿ ಆದೇಶ
ಮಂಗಳೂರು; ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಯನ್ನು ಕಾಪಾಡುವ ಹಿತದೃಷ್ಟಿಯಿಂದ ಅಪರಾಧ ಹಿನ್ನೆಲೆಯುಳ್ಳ 11 ಮಂದಿಯನ್ನುದಕ್ಷಿಣ ಕನ್ನಡ ಜಿಲ್ಲೆಯಿಂದ 6 ತಿಂಗಳ ಕಾಲ ಗಡಿಪಾರು ಮಾಡಲಾಗಿದೆ.
ಮುಂಬರುವ ವಿಧಾನಸಭೆ ಚುನಾವಣಾ ಹಿನ್ನಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜಿಲ್ಲಾ ಪೊಲೀಸ್ ಅಧೀಕ್ಷಕರ ವರದಿಯ ಆಧಾರದ ಮೇಲೆ ಜಿಲ್ಲಾಧಿಕಾರಿಯವರು ವಿಚಾರಣೆ ಕೈಕೊಂಡು 11 ಮಂದಿಯನ್ನುದಕ್ಷಿಣ ಕನ್ನಡ ಜಿಲ್ಲೆಯಿಂದ ಮಾ.6 ರಿಂದ ಸೆ.6ವರೆಗೆ 6 ತಿಂಗಳ ಕಾಲ ಗಡಿಪಾರು ಮಾಡಿ ಆದೇಶ ಹೊರಡಿಸಿದ್ದಾರೆ.
ಗಡಿಪಾರಿಗೆ ಒಳಗಾದವರು ಯಾರು ಯಾರು?:
ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಜೀರ್ ಕುಣಿಗಲ್, ಇಬ್ರಾಹಿಂ ಖಲೀಲ್, ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ಜಯರಾಜ ರೈ, ಪುತ್ತೂರು ನಗರ ಠಾಣಾ ವ್ಯಾಪ್ತಿಯ ಇಬ್ರಾಹಿಂ, ಹಕೀಂ ಕೂರ್ನಡ್ಕ, ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ರೋಷನ್, ಪ್ರಸಾದ್, ಉಪ್ಪಿನಂಗಡಿ ಪೊಲೀಸ್‌ಠಾಣಾ ವ್ಯಾಪ್ತಿಯ ಅಬೂಬಕ್ಕರ್ ಸಿದ್ದಿಕ್, ಉಬೈದ್ ಬಿ.ಎಸ್, ತಸ್ಲಿಂ, ಧರ್ಮಸ್ಥಳ
ಪೊಲೀಸ್ ಠಾಣಾ ವ್ಯಾಪ್ತಿಯ ಕಿರಣ್ ಕುಮಾರ್ ಡಿ. ಗಡೀಪಾರು ಶಿಕ್ಷೆಗೆ ಒಳಗಾದವರು.