Log In
BREAKING NEWS >
ಉಡುಪಿ ನಗರದಲ್ಲಿನ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿಮಳಿಗೆಯಾದ "ಕಲ್ಸ೦ಕ ಗಿರಿಜಾ ಸಿಲ್ಕ್"ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭ.

ಕರ್ನಾಟಕ ವಿಧಾನಸಭೆ ಚುನಾವಣೆ: 80 ವರ್ಷ ಮೇಲ್ಪಟ್ಟವರು, ವಿಶೇಷ ಚೇತನರು ಮನೆಯಿಂದಲೇ ಮತ ಚಲಾಯಿಸಲು ವ್ಯವಸ್ಥೆ!

ಬೆಂಗಳೂರು: ಇದೇ ಮೊದಲ ಬಾರಿಗೆ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ಬಯಸಿದರೆ ಅದಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿಂದು ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿದ ಅವರು, ಕಳೆದ ಮೂರು ದಿನಗಳಿಂದ ರಾಜಕೀಯ ಪಕ್ಷಗಳು, ಸರ್ಕಾರದ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಮೇ 24ಕ್ಕೆ ಹಾಲಿ ಸರ್ಕಾರದ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮುಂಚಿತವಾಗಿ ಚುನಾವಣೆ ಮುಗಿಸಬೇಕಾಗಿದೆ. ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆ ಸ್ಥಾಪಿಸಲಾಗುವುದು, ಒಂದು ಮತಗಟ್ಟೆಯಲ್ಲಿ 883 ಜನರು ಮತ ಚಲಾಯಿಸಬಹುದಾಗಿದ್ದು, ನಗರ ಪ್ರದೇಶದಲ್ಲಿ 24,063 ಮತಗಟ್ಟೆ ಸ್ಥಾಪಿಸಲಾಗುವುದು, ಒಟ್ಟು 2,2,73,579 ಮತದಾರರಿದ್ದು, ವಿಶೇಷ ಚೇತನರಿಗೆ ವೀಲ್ಹ್ ಚೇರ್ ಸೇರಿದಂತೆ ಮತದಾನಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದು ಅವರು ತಿಳಿಸಿದರು.

No Comments

Leave A Comment