ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಥ್ರಿಲ್ಲರ್ ಟೆಸ್ಟ್ ನಲ್ಲಿ ಶ್ರೀಲಂಕಾ ವಿರುದ್ದ ನ್ಯೂಜಿಲೆಂಡ್ ಗೆ ಜಯ: WTC ಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಕ್ರೈಸ್ಟ್ ಚರ್ಚ್: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ರೇಸ್ ನಲ್ಲಿ ಭಾರತಕ್ಕೆ ತೀವ್ರ ಪೈಪೋಟಿ ನೀಡಿದ್ದ ಶ್ರೀಲಂಕಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲುವ ಮೂಲಕ ರೇಸ್ ನಿಂದ ಹೊರ ಬಿದ್ದಿದ್ದು, ಭಾರತ WTC ಫೈನಲ್ ಗೆ ಲಗ್ಗೆ ಇಟ್ಟಿದೆ.

ಹೌದು. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲನೇ ಪಂದ್ಯದಲ್ಲಿ ನ್ಯೂಜಿಲೆಂಡ್ 2 ವಿಕೆಟ್‌ಗಳ ರೋಚಕ ಜಯ ಸಾಧಿಸಿದೆ. ಈ ಸೋಲಿನೊಂದಿಗೆ ಶ್ರೀಲಂಕಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ಕನಸು ಭಗ್ನಗೊಂಡಿದ್ದು, ಭಾರತ ನೇರವಾಗಿ ಪ್ರವೇಶ ಪಡೆದುಕೊಂಡಿದೆ.

ಅಂತಿಮ ಓವರ್ ವರೆಗೂ ಶ್ರೀಲಂಕಾ ಕೂಡ ಪಟ್ಟುಬಿಡದೆ ಹೋರಾಡಿದರು, ಕೊನೆಗೆ ಸೋಲೊಪ್ಪಿಕೊಂಡಿದೆ. ಭಾರತ ಆಸ್ಟ್ರೇಲಿಯಾ ನಡುವಿನ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡರು ಭಾರತ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದುಕೊಂಡಿದೆ.

No Comments

Leave A Comment