Log In
BREAKING NEWS >
ಮಾರ್ಚ್ 22ರ೦ದು ಚ೦ದ್ರಾಮಾನ ಯುಗಾದಿ ,ಏಪ್ರಿಲ್ 15ರ೦ದು ಸೌರಮಾನ ಯುಗಾದಿ ಹಬ್ಬವು ನಡೆಯಲಿದೆ.ಹಲವಾರು ಗಣ್ಯರು ಯುಗಾದಿ ಹಬ್ಬದ ಶುಭಾಶಯವನ್ನು ಕೋರಿರುತ್ತಾರೆ.....

Oscar Award 2023: ಇತಿಹಾಸ ಬರೆದ ರಾಜಮೌಳಿ RRR, ‘ನಾಟು ನಾಟು..’ ಹಾಡಿಗೆ ಆಸ್ಕರ್ ಹಿರಿಮೆ, ಅಕಾಡೆಮಿ ಅವಾರ್ಡ್ಸ್ ನಲ್ಲಿ ಇತಿಹಾಸ ಬರೆದ ಭಾರತ!

ಲಾಸ್ ಏಂಜಲೀಸ್: ಅಕಾಡೆಮಿ ಅವಾರ್ಡ್ಸ್ ಸಮಾರಂಭದಲ್ಲಿ ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.

ಅತ್ಯುತ್ತಮ ಹಾಡು ವಿಭಾಗದಲ್ಲಿ ನಾಟು ನಾಟು ಹಾಡಿಗೆ ಆಸ್ಕರ್ ಅವಾರ್ಡ್ ಲಭ್ಯವಾಗಿದೆ. ‘ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ.

ನಾಟು ನಾಟು ಹಾಡಿಗೆ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು ಜೋರಾಗಿತ್ತು. ಭಾರತದಲ್ಲೂ ರಾಮ್ ಚರಣ್ ಮತ್ತು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಭಾರತೀಯ ಸಿನಿಮಾ ರಂಗದ ಅನೇಕರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರುತ್ತಿದ್ದಾರೆ. ಅದರಲ್ಲೂ ತೆಲುಗು ಸಿನಿಮಾ ರಂಗದಲ್ಲಿ ಹಬ್ಬದ ವಾತಾವರಣವೇ ಕಂಡು ಬಂದಿದೆ.

ಇದನ್ನೂ ಓದಿ: ‘ದಿ ಎಲಿಫೆಂಟ್ ವಿಸ್ಪರರ್ಸ್’ ಡಾಕ್ಯುಮೆಂಟರಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ: ಭಾರತಕ್ಕೆ ಕೀರ್ತಿ ತಂದ ನಿರ್ದೇಶಕ ಕಾರ್ತಿಕಿ ಗೊನ್ಸಾಲ್ವೆಸ್

ಅಮೆರಿಕಾದ ಲಾಸ್ ಏಂಜಲೀಸ್ ಡಾಲ್ಬಿ ಥಿಯೇಟರ್ ನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಜಗತ್ತಿನ ಹೆಸರಾಂತ ಕಲಾವಿದರು ಹಾಗೂ ತಂತ್ರಜ್ಞರು ಭಾಗಿಯಾಗಿದ್ದಾರೆ. ಅಲ್ಲದೇ ನಿರ್ದೇಶಕ ರಾಜಮೌಳಿ, ನಟರಾದ ರಾಮ್ ಚರಣ್, ಜ್ಯೂನಿಯರ್ ಎನ್.ಟಿ.ಆರ್ ಸೇರಿದಂತೆ ಆರ್.ಆರ್.ಆರ್ ಚಿತ್ರತಂಡ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಭಾಗಿಯಾಗಿದೆ.

ಭಾರತದಿಂದ ಒಂದು ಸಿನಿಮಾ ಮತ್ತು ಎರಡು ಡಾಕ್ಯುಮೆಂಟರಿಗಳು ಪ್ರಶಸ್ತಿಯ ಕಣದಲ್ಲಿದ್ದವು. ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಈ ಕಾರ್ಯಕ್ರಮದ ನಿರೂಪಣೆ ಮಾಡುತ್ತಿರುವುದು ಹೆಮ್ಮೆ ತಂದಿದೆ.

ಆಸ್ಕರ್ ಪ್ರಶಸ್ತಿಯ ಟ್ರೋಫಿ ಜೊತೆ ನಗದು ಬಹುಮಾನ ಕೊಡದೇ ಇದ್ದರೂ, ಉಡುಗೊರೆಯ ರೂಪದಲ್ಲಿ ಅನೇಕ ವಸ್ತುಗಳು, ಪ್ರವಾಸ ಪ್ಯಾಕೇಜ್ ಗಳು ವಿಜೇತರಿಗೆ ಸಿಗುತ್ತವೆ. ಕೇವಲ ಪ್ರಶಸ್ತಿ ಗೆದ್ದವರಿಗೆ ಮಾತ್ರವಲ್ಲ, ನಾಮ ನಿರ್ದೇಶನಗೊಂಡವರಿಗೆ ಉಡುಗೊರೆ ಇರಲಿದೆ.

ಈ ಬಾರಿ ಗಿಫ್ಟ್ ಬಾಕ್ಸ್ ನಲ್ಲಿ 1 ಲಕ್ಷ ಡಾಲರ್ ಮೌಲ್ಯದ ಉಡುಗೊರೆಗಳು ಇವೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಪೀಸೆಸ್ ಆಫ್ ಆಸ್ಟ್ರೇಲಿಯಾ ಹೆಸರಿನ ಕಂಪೆನಿಯೊಂದು ನಾಮ ನಿರ್ದೇಶನಗೊಂಡವರಿಗೆ ಆಸ್ಟ್ರೇಲಿಯಾದಲ್ಲಿ ಒಂದು ಚದರ ಮೀಟರ್ ಭೂಮಿ ಕೊಡಲು ಮುಂದಾಗಿದೆಯಂತೆ.

No Comments

Leave A Comment