ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಪುತ್ತೂರು: ಅಕ್ರಮ ಗಾಂಜಾ ಮಾರಾಟ – ಕಾರು ಸಹಿತ ಓರ್ವ ಅರೆಸ್ಟ್
ಪುತ್ತೂರು:ಮಾ 17 . ಒಳಮೊಗ್ರು ಗ್ರಾಮದ ಪರ್ಪುಂಜ ಎಂಬಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವನ್ನು ಬಂಧಿಸಿ, ಆತನಲ್ಲಿದ್ದ ಗಾಂಜಾ ಹಾಗೂ ಕಾರನ್ನು ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ.
ಪಾಣಾಜೆ ಗ್ರಾಮದ ನಿವಾಸಿ ಅಬೂಬಕ್ಕರ್ ಸಿದ್ದಿಕ್ (35) ಬಂಧಿತ ಆರೋಪಿ.
ಅಕ್ರಮವಾಗಿ ಅಬೂಬಕ್ಕರ್ ಸಿದ್ದಿಕ್ ಎಂಬಾತ ಕಾರಿನಲ್ಲಿ ಗ್ರಾಹಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದುದನ್ನು ಪತ್ತೆ ಹಚ್ಚಿದ ಪೊಲೀಸರು ಆತನಲ್ಲಿದ್ದ ಸುಮಾರು 27 ಸಾವಿರ ಮೌಲ್ಯದ 670 ಗ್ರಾಂ ಗಾಂಜಾ ಮತ್ತು ಸುಮಾರು 70 ಸಾವಿರ ಮೌಲ್ಯದ ಕಾರನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಇನ್ನು ಆರೋಪಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.