ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...
ಮೊದಲ ಏಕದಿನ ಪಂದ್ಯ: ಶಮಿ ಮಾರಕ ಬೌಲಿಂಗ್, 188 ರನ್ ಗಳಿಗೆ ಆಸ್ಟ್ರೇಲಿಯಾ ಆಲೌಟ್
ಮುಂಬೈ: ಪ್ರವಾಸಿ ಆಸ್ಟ್ರೇಲಿಯಾ ಮತ್ತು ಟೀಂ ಇಂಡಿಯಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ 188 ರನ್ ಗಳಿಗೆ ಆಲೌಟ್ ಆಗಿದೆ.
ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ 188 ರನ್ ಗಳಿಗೆ ಆಲೌಟ್ ಆಗಿದ್ದು ಭಾರತಕ್ಕೆ ಗೆಲ್ಲಲು 189 ರನ್ ಗುರಿ ನೀಡಿದೆ.
ಆಸ್ಟ್ರೇಲಿಯಾ ತನ್ನ ಕೊನೆಯ ಐದು ವಿಕೆಟ್‌ಗಳನ್ನು 19 ರನ್‌ಗಳೊಳಗೆ ಕಳೆದುಕೊಂಡಿತು. ಇದರಲ್ಲಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ತಲಾ ಮೂರು ವಿಕೆಟ್ ಕಬಳಿಸಿದರು. ಆಸ್ಟ್ರೇಲಿಯಾ ಪರ ಮಿಚೆಲ್ ಮಾರ್ಷ್ ಅತ್ಯಧಿಕ 81 ರನ್ ಮತ್ತು ಜೋ ಇಂಗ್ಲಿಸ್ 26 ರನ್ ಗಳಿಸಿದರು. ಆಸ್ಟ್ರೇಲಿಯಾದ ಐವರು ಬ್ಯಾಟ್ಸ್‌ಮನ್‌ಗಳು ಎರಡಂಕಿ ತಲುಪಲು ಸಾಧ್ಯವಾಗಲಿಲ್ಲ.
ಭಾರತದ ಪರ ರವೀಂದ್ರ ಜಡೇಜಾ 2, ಹಾರ್ದಿಕ್ ಪಾಂಡ್ಯ ಹಾಗೂ ಕುಲದೀಪ್ ಯಾದವ್ ತಲಾ 1 ವಿಕೆಟ್ ಪಡೆದಿದ್ದಾರೆ.