ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರ ವಹಿಸಲಿವೆ: ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್
ಕೋಲ್ಕತ್ತಾ: ಮುಂಬರುವ ದಿನಗಳಲ್ಲಿ ವಿಪಕ್ಷಗಳ ಮೈತ್ರಿಕೂಟ ರೂಪುಗೊಳ್ಳಲಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳು ಪ್ರಮುಖ ಪಾತ್ರವಹಿಸಲಿವೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಭಾನುವಾರ ಹೇಳಿದ್ದಾರೆ.
ಪಿಟಿಐ ವೀಡಿಯೊಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಅಖಿಲೇಶ್ ಯಾದವ್ ಅವರು, ವಿಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನಗಳು ಮುಂದುವರೆದಿವೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಈ ಕುರಿತು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ವಿಪಕ್ಷಗಳ ಮೈತ್ರಿಕೂಟ ರೂಪುಗೊಳ್ಳುವ ವಿಶ್ವಾಸ ನನಗಿದೆ. ಪ್ರತಿಪಕ್ಷಗಳ ಮೈತ್ರಿಯು ಬಿಜೆಪಿ ವಿರುದ್ಧ ಹೋರಾಡುತ್ತದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಹಾಗೂ ಬಿಜೆಪಿಯನ್ನು ಒಂದೇ ತಕ್ಕಡಿಯಲ್ಲಿ ಇರಿಸಿ ತೂಗಲಾಗುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ವಿವಿಧ ರಾಜ್ಯಗಳಲ್ಲಿನ ಪ್ರಾದೇಶಿಕ ಪಕ್ಷಗಳು ಕೇಸರಿ ಪಕ್ಷಧ ವಿರುದ್ಧ ಹೋರಾಟ ನಡೆಸುತ್ತಿದೆ ಎಂದು ತಿಳಿಸಿದ್ದಾರೆ.
“ಹಲವು ರಾಜ್ಯಗಳಲ್ಲಿ, ಬಿಜೆಪಿಗೆ ಹೋಲಿಸಿದರೆ ಕಾಂಗ್ರೆಸ್ ಅಸ್ತಿತ್ವದಲ್ಲಿಲ್ಲ, ಆದರೆ ಪ್ರಾದೇಶಿಕ ಪಕ್ಷಗಳು ಬಿಜೆಪಿ ವಿರುದ್ಧ ಹೋರಾಟ ನಡೆಸುತ್ತಿದೆ. ಈ ಹೋರಾಟದಲ್ಲಿ ಯಶಸ್ವಿಯಾಗುತ್ತಾರೆಂಬ ಭರವಸೆ ಇದೆ ಎಂದು ತಿಳಿಸಿದರು.
ಜೆಡಿಯು, ಆರ್‌ಜೆಡಿ ಮತ್ತು ಡಿಎಂಕೆಯಂತಹ ಪ್ರಾದೇಶಿಕ ಪಕ್ಷಗಳು ಕಾಂಗ್ರೆಸ್ ಅನ್ನು ವಿರೋಧ ಪಕ್ಷದ ಮೈತ್ರಿಯಲ್ಲಿರಲು ಉತ್ಸುಕವಾಗಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅವರು ಈಗಾಗಲೇ ಹಳೆಯ ಪಕ್ಷದೊಂದಿಗೆ ಒಕ್ಕೂಟದಲ್ಲಿದ್ದಾರೆ. ಇದು ದೊಡ್ಡ ಹೋರಾಟವಾಗಿದೆ. ಈ ಹೋರಾಟದಲ್ಲಿ ಕಾಂಗ್ರೆಸ್ ತನ್ನ ಪಾತ್ರವನ್ನು ನಿರ್ಧರಿಸುತ್ತದೆ ಎಂದು ಹೇಳಿದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷದ ಪಾಳೆಯದ ಮುಂದಾಳತ್ವ ಯಾರು ವಹಿಸುತ್ತಾರೆಂಬ ಪ್ರಶ್ನೆಗೆ ಉತ್ತರಿಸಿದ ಯಾದವ್, ಚುನಾವಣೆಯ ನಂತರ ಅದನ್ನು ನಿರ್ಧರಿಸಲಾಗುವುದು. ನೀವು ಮುಂದಾಳತ್ವದ ಕುರಿತು ಮಾತನಾಡುತ್ತಿದ್ದೀರಿ. 2014 ಮತ್ತು 2019 ರಲ್ಲಿ (ಬಿಜೆಪಿ) ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ ಸುಳ್ಳು ಭರವಸೆಗಳನ್ನು ನೀಡಿತ್ತು. ಆಗ ಅದರ ಮುಂದಾಳತ್ವವನ್ನು ಯಾರು ವಹಿಸಿದ್ದರು ಎಂದು ಪ್ರಶ್ನಿಸಿದರು. ಅಲ್ಲದೆ, 2017 ಮತ್ತು 2019ರಲ್ಲಿ ಬಿಜೆಪಿ ನೀಡಿದ ಯಾವುದೇ ಭರವಸೆಗಳನ್ನು ಈಡೇರಿಸಿಲ್ಲ ಎಂದು ಹೇಳಿದರು.
ಕಾಂಗ್ರೆಸ್ ಮುಷ್ಟಿಯಲ್ಲಿರುವ ಉತ್ತರಪ್ರದೇಶದ ರಾಯ್‌ಬರೇಲಿ ಮತ್ತು ಅಮೇಥಿ ಸಮಾಜವಾದಿ ಪಕ್ಷ ಸ್ಪರ್ಧಿಸುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಮೇಥಿಯಲ್ಲಿ ನಮ್ಮ ಪಕ್ಷದ ಕಾರ್ಯಕರ್ತನ್ನು ಹತ್ಯೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಅಮೇಥಿಯಲ್ಲಿ ನಮ್ಮ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಅವರಿಗಾಗಿ ಯಾರು ಹೋರಾಡುತ್ತಾರೆ ಎಂದು ಸಮಾಜವಾದಿ ಪಕ್ಷದ ಕಾರ್ಯಕರ್ತರು ಪ್ರಶ್ನಿಸುತ್ತಿದ್ದಾರೆ. ಅಲ್ಲಿನ ಸಮಾಜವಾದಿ ಕಾರ್ಯಕರ್ತರು ಪರಸ್ಪರ ಬೆಂಬಲಿಸುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಬೆಂಬಲಕ್ಕೆ ಬರುತ್ತಿಲ್ಲ ಎಂದರು.
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಯ್ಬರೇಲಿಯ ಸಂಸದರಾಗಿದ್ದರೆ, ಅವರ ಪುತ್ರ ಮತ್ತು ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು 2019 ರ ಲೋಕಸಭೆ ಚುನಾವಣೆಯಲ್ಲಿ ಅಮೇಥಿಯಿಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರನ್ನು ಸೋಲಿಸಿದ್ದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಬಿಜೆಪಿಯ ತಂತ್ರಕ್ಕೆ ಕಡಿವಾಣ ಹಾಕಲು ಎಲ್ಲಾ ಪ್ರಯತ್ನಗಳನ್ನು ಮಾಡಲಾಗುತ್ತಿದೆ. 2024ರಲ್ಲಿ ಬಿಜೆಪಿ ಅಧಿಕಾರದಿಂದ ಇಳಿಯಬೇಕಾದರೆ, ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲ್ಲಲೇಬೇಕಿಗೆ. ಉತ್ತರಪ್ರದೇಶದಲ್ಲಿ ಬಿಜೆಪಿಯನ್ನು ಸೋಲಿಸುವುದು ಖಚಿತ. ದೇಶದಲ್ಲೂ ಬಿಜೆಪಿಯನ್ನು ಸೋಲಿಸುತ್ತೇವೆ, ಬಿಜೆಪಿ ಸೋಲಿಸಲು ಉತ್ತರ ಪ್ರದೇಶದಲ್ಲಿ ನಾವು ನಮ್ಮ ಅಸ್ತಿತ್ವದಲ್ಲಿರುವ ಮಿತ್ರಪಕ್ಷಗಳೊಂದಿಗೆ ಸೇರಿ ಹೋರಾಡುತ್ತೇವೆ ಎಂದರು.
ಅದಾನಿ ಪ್ರಕರಣ ಕುರಿತು ಮಾತನಾಡಿ. ದೇಶದ ಆಸ್ತಿ ಮತ್ತು ಸಾರ್ವಜನಿಕ ಹಣವನ್ನು ಲೂಟಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು.
ಉತ್ತರಪ್ರದೇಶದಲ್ಲಿ 2017ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಹಾಗೂ ಕಾಂಗ್ರೆಸ್ ಪಕ್ಷ ಕೈಜೋಡಿಸಿ ಬಿಜೆಪಿ ವಿರುದ್ಧ ಹೋರಾಡಿತ್ತು. ಆದರೂ, ಬಿಜೆಪಿ ಗೆಲವು ಸಾಧಿಸಿತ್ತು.