Log In
BREAKING NEWS >
ನವೆ೦ಬರ್ 27ರ೦ದು ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ದೀಪೋತ್ಸವ ಕಾರ್ಯಕ್ರಮ ಜರಗಲಿದೆ...

ಕೋವಿಡ್ ಪ್ರಕರಣಗಳ ಏರಿಕೆ: 24 ಗಂಟೆಗಳಲ್ಲಿ 918 ಹೊಸ ಕೊರೊನಾವೈರಸ್ ಸೋಂಕು, ನಾಲ್ವರು ಸಾವು

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿ ಸಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 918 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 6,350ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ಇದೇ ಅವಧಿಯಲ್ಲಿ, ರಾಜಸ್ಥಾನದಲ್ಲಿ 2, ಕರ್ನಾಟಕ ಮತ್ತು ಕೇರಳದಲ್ಲಿ ತಲಾ ಒಬ್ಬರು ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆ 5,30,806 ಕ್ಕೆ ಏರಿಕೆಯಾಗಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ದೈನಂದಿನ ಪಾಸಿಟಿವಿಟಿ ದರ ಶೇ 2.08ರಷ್ಟಿದ್ದು, ವಾರದ ಪಾಸಿಟಿವಿಟಿ ದರ ಶೇ 0.86ರಷ್ಟಿದೆ. ದೇಶದಾದ್ಯಂತ ಈವರೆಗೆ 4,46,96,338 ಮಂದಿಗೆ ಸೋಂಕು ತಲುಲಿದೆ ಎಂದು ಸಚಿವಾಲಯ ತಿಳಿಸಿದೆ.

ದೇಶದಾದ್ಯಂತ ಈವರೆಗೆ 4,41,59,182 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೈನಂದಿನ ಮರಣ ಪ್ರಮಾಣ ಶೇ 1.19ರಷ್ಟಿದೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.65 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

No Comments

Leave A Comment